ಶುಕ್ರವಾರ, ಆಗಸ್ಟ್ 12, 2022
23 °C

ವಿಜಯಪುರ: ಮೂರು ಸರ್ಕಾರಿ ಆಸ್ಪತ್ರೆಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೋವಿಡ್ ಸಂಕಷ್ಟದ ಸಮಯದಲ್ಲೂ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಿದ ಜಿಲ್ಲೆಯ ಮೂರು ಸರ್ಕಾರಿ ಆಸ್ಪತ್ರೆಗಳಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದ ಗುಣಮಟ್ಟ ಭರವಸೆ ಪ್ರಶಸ್ತಿ ಪತ್ರ ಲಭಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ ಅವರು ತಿಳಿಸಿದ್ದಾರೆ.

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೀಡಲಾಗುವ ರಾಷ್ಟ್ರೀಯ ಗುಣಮಟ್ಟ ಭರವಸೆ ಪ್ರಶಸ್ತಿ ಪತ್ರವನ್ನು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಹೂರ್ತಿ, ತಿಕೋಟಾ ಮತ್ತು ವಿಜಯಪುರದ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪಡೆದಿವೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಪತ್ರ ಪಡೆದ ಆರೋಗ್ಯ ಸಂಸ್ಥೆಗಳ ಆಡಳಿತ ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರಾದ ಡಾ. ಸಂತೋಷ ಜೆ. ಕೆ, ಜಿಲ್ಲಾ ಆಸ್ಪತ್ರೆ ಗುಣಮಟ್ಟ ಭರವಸೆ ವ್ಯವಸ್ಥಾಪಕ ಮೆಹಬೂಬಪಾಷಾ ಕರಜಗಿ, ಮತ್ತು ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಈರಪ್ಪ ಸ. ಹೊನಗೇಕರ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜೇಶ್ವರಿ ಗೋಲಗೇರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು