ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರಧ್ವಜ ಅಸ್ಮಿತೆಯ ಪ್ರತೀಕ: ಸಿಎಂ ಸಿದ್ದರಾಮಯ್ಯ

Published 2 ಫೆಬ್ರುವರಿ 2024, 16:17 IST
Last Updated 2 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ವಿಜಯಪುರ: ‘ಮಂಡ್ಯ ಜಿಲ್ಲೆಯ ಕೆರಗೋಡು ಹನುಮಧ್ವಜ ಪ್ರಕರಣವನ್ನು ಸಿಬಿಐಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳುತ್ತಾರೆ. ಆದರೆ, ಅವರಿಗೆ ಆ ಪ್ರಕರಣದ ವಾಸ್ತವಾಂಶವೇ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮ ಪಂಚಾಯಿತಿಯಲ್ಲಿ ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ’ ಎಂದು ಅವರು ಮುದ್ದೇಬಿಹಾಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜವನ್ನು ಸದಾ ಗೌರವಿಸುತ್ತದೆ. 1935ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT