ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ, ಗೃಹ ಸಚಿವರ ಹೇಳಿಕೆ ಖಂಡನೀಯ: ಸಂತೋಷ ಪಾಟೀಲ

Published 20 ಏಪ್ರಿಲ್ 2024, 15:28 IST
Last Updated 20 ಏಪ್ರಿಲ್ 2024, 15:28 IST
ಅಕ್ಷರ ಗಾತ್ರ

ಸಿಂದಗಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಮಾಡಿದ ಆರೋಪಿಗೆ ತಕ್ಷಣವೇ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ಶನಿವಾರ ಇಲ್ಲಿಯ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು  ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿಯ ಸಂಗಮೇಶ್ವರ ದೇವಸ್ಥಾನದಿಂದ ಹಲಗೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ವಿವೇಕಾನಂದ ವೃತ್ತಕ್ಕೆ ತಲುಪಿತು.

ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ‘ನೇಹಾ ಕೊಲೆ ಪ್ರಕರಣ ಕುರಿತು ಮುಖ್ಯಮಂತ್ರಿ ಮತ್ತು ಗೃಹಸಚಿವರು ನೀಡಿರುವ  ಹೇಳಿಕೆ ಖಂಡನೀಯ’ ಎಂದರು.

ಲಿಂಬೆ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಶಿಲ್ಪಾ ಕುದರಗೊಂಡ, ಪ್ರಧಾನಕಾರ್ಯದರ್ಶಿ ಗುರು ತಳವಾರ ಹಾಗೂ ಜಂಗಮ ಕ್ಷೇಮಾಭಿವೃದ್ದಿ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ ಮಾತನಾಡಿದರು.

ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ನಾರಾಯಣಪುರ, ಬಿಜೆಪಿ ಮಹಿಳಾ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷೆ ನೀಲಮ್ಮ ಯಡ್ರಾಮಿ, ಬಿಜೆಪಿ ಪ್ರಮುಖರಾದ ಸಿದ್ರಾಮ ಆನಗೊಂಡ, ಶ್ರೀಶೈಲಗೌಡ ಬಿರಾದಾರ, ಎಸ್.ಆರ್.ಪಾಟೀಲ, ಶಿದ್ಧಲಿಂಗಯ್ಯ ಹಿರೇಮಠ, ಪ್ರಶಾಂತ ಕದ್ದರಕಿ, ಸಾಯಬಣ್ಣ ದೇವರಮನಿ ಸೇರಿದಂತೆ ಅನೇಕರು ಇದ್ದರು.

ಪ್ರತಿಭಟನಕಾರರು ತಹಶೀಲ್ದಾರ್‌ ಪ್ರದೀಪಕುಮಾರ ಹಿರೇಮಠ ಮತ್ತು ಗ್ರೇಡ್-2 ತಹಶೀಲ್ದಾರ್‌ ಇಂದಿರಾಬಾಯಿ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT