ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹತ್ಯೆ ಖಂಡಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್‌

Published 23 ಏಪ್ರಿಲ್ 2024, 13:22 IST
Last Updated 23 ಏಪ್ರಿಲ್ 2024, 13:22 IST
ಅಕ್ಷರ ಗಾತ್ರ

ಮುದ್ದೇಬಿಹಾಳ(ವಿಜಯಪುರ): ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆ ಖಂಡಿಸಿ ಮುದ್ದೇಬಿಹಾಳ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಸ್ವಯಂಪ್ರೇರಿತರಾಗಿ ವ್ಯಾಪಾರಸ್ಥರು ತಮ್ಮ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವ ಮೂಲಕ ಅಗಲಿದ ವಿದ್ಯಾರ್ಥಿನಿಗೆ ಗೌರವ ಸಲ್ಲಿಸಿದರು.

ಪಟ್ಟಣದ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲ ಧರ್ಮೀಯರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ, ಹತ್ಯಗೀಡಾದ ನೇಹಾ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ವಿವಿಧ ಹಿಂದೂ ಪರ ಸಂಘಟನೆಗಳು, ವ್ಯಾಪಾರಸ್ಥರು ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.  ರಸ್ತೆಗಳಲ್ಲಿ ಜನರ ಓಡಾಟ ವಿರಳವಾಗಿತ್ತು. ವಾಹನ ಸಂಚಾರ ಎಂದಿನಂತಿತ್ತು. ಗ್ರಾಮೀಣ ಭಾಗದಿಂದ ಮದುವೆ ಖರೀದಿಗೆ ಬಂದ ಜನ ಮಧ್ಯಾಹ್ನದ ವರೆಗೂ ಕಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT