ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ರೈತ ಹೋರಾಟಕ್ಕೆ ಬೆಂಬಲ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣಾ ಕಾಯ್ದೆಗಳಿಗೆ ವಿರೋಧ
Last Updated 1 ಡಿಸೆಂಬರ್ 2020, 12:06 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ರೈತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ದೇಶದ ಬೆನ್ನೆಲುಬಾದ ದೇಶದ ರೈತನ ಬನ್ನಿಗೆಕೇಂದ್ರ ಸರ್ಕಾರ ಚೂರಿ ಹಾಕುತ್ತಿದೆ. ಹೋರಾಟ ಮಾಡುವುದು ಪ್ರತಿಯೊಬ್ಬ ಭಾರತೀಯನ ಸಂವಿದಾನಾತ್ಮಕ ಹಕ್ಕು ಇದೆ. ಆದರೆ, ಕೇಂದ್ರ ಸರ್ಕಾರಕ್ಕೆ ಹೋರಾಟವನ್ನು ಸಹಿಸಿಕೊಳ್ಳಲಾಗುತ್ತಿಲ್ಲ. ಹೋರಾಟಗಾರರು ದೆಹಲಿ ಪ್ರವೇಶ ಮಾಡದಂತೆ ರಸ್ತೆ ಅಗೆದು, ಬ್ಯಾರಿಕೇಡ್ ನಿಲ್ಲಿಸಿ ತಡೆಯುತ್ತಿದ್ದಾರೆ. ಜಲ ಪಿರಂಗಿ ಸಿಡಿಸುತ್ತಿದ್ದಾರೆ. ಲಾಠಿ ಚಾರ್ಜ್‌ ಮಾಡುತ್ತಿದ್ದಾರೆ. ಈ ಮೂಲಕ ಹೋರಾಟ ಮಾಡುವ ಹಕ್ಕು ಕಿತ್ತುಕೊಳ್ಳುವಂತಹ ಕುತಂತ್ರ ಬುದ್ದಿ ತೋರಿಸುತ್ತಿದೆ ಎಂದರು.

ಪಂಜಾಬ್‌, ಹರಿಯಾಣ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯಗಳಿಂದ ಲಕ್ಷಾಂತರ ರೈತರು, ಮಹಿಳೆಯರು ತಮ್ಮ ಮಕ್ಕಳೊಂದಿಗೆ ದೆಹಲಿಗೆ ಆಗಮಿಸಿ ಕಳೆದ ಆರು ದಿನಗಳಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದು ದೇಶದ ಸ್ಫೂರ್ತಿಯ ಹೋರಾಟವಾಗಿದೆ ಎಂದು ಹೇಳಿದರು.

ರೈತ ವಿರೋಧಿ ಕಾರ್ಪೊರೇಟ್ ಕಂಪನಿಗಳ ಪರವಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಬೀಜಕಾಯ್ದೆ ತಿದ್ದುಪಡಿ 2020 ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದನ್ನು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸುತ್ತದೆ ಎಂದರು.

ರೈತ ಮುಖಂಡರಾದ ಭೀಮಶಿ ಕಲಾದಗಿ, ಬಿ. ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಬಾಳು ಜೇವೂರ ಮಾತನಾಡಿದರು. ಮುಖಂಡರಾದ ಪ್ರಕಾಶ್ ಕಿಲಾರೆ, ಆಕಾಶ್‌, ಭೀಮಶಿ ಕೊಟ್ಯಾಳ, ರಾಜಾಸಾಬ ಕೊಲ್ಹಾರ, ಸುರೇಖಾ ರಜಪೂತ, ಸದಾಶಿವ ಬರಟಗಿ, ಸಿದ್ರಾಮ ಬಂಗಾರಿ, ಸಂಗಪ್ಪ ಕಪಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT