ಬುಧವಾರ, ಸೆಪ್ಟೆಂಬರ್ 29, 2021
20 °C

ವಿಜಯಪುರ: ‘ನೂತನ ಶಿಕ್ಷಣ ನೀತಿ ಜ್ಞಾನದ ಮಹಾ ಶಕ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ವಿದ್ಯಾರ್ಥಿನಿಯರಿಗೆ ಭಾರತೀಯ ತತ್ವ, ಸಿದ್ಧಾಂತ, ಪರಂಪರೆ ಜೊತೆ ಜೊತೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಭಾರತವನ್ನು ಚಿರಸ್ಥಾಯಿಗೊಳಿಸಬಹುದಾಗಿದೆ ಎಂದು ಪ್ರಾಚಾರ್ಯರಾದ ಡಾ.ಆರ್. ಎಂ. ಮಿರ್ಧೆ ಹೇಳಿದರು.

ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ  ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿನಿಯರಿಗೆ ಗುಣ ಮಟ್ಟದ ಶಿಕ್ಷಣವನ್ನು ನೀಡುವುದರಿಂದ ಭಾರತವನ್ನು ಜಾಗತಿಕ ಜ್ಞಾನದ ಮಹಾ ಶಕ್ತಿಯಾಗಿ ಮತ್ತು ವಿಶ್ವನಾಗರಿಕರನ್ನಾಗಿ ರೂಪಿಸಬಹುದು ಎಂದರು.

ನೂತನ ರಾಷ್ಟೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಸೃಜನಶೀಲತೆ ಗುರುತಿಸುವಲ್ಲಿ ಮತ್ತು ಪೋಷಿಸುವಲ್ಲಿ ಸಹಾಯವಾಗುತ್ತದೆ. ಇದರಿಂದ ಮಕ್ಕಳು ವಿಚಾರವಂತರು, ನೀತಿವಂತರಾಗುತ್ತಾರೆ. ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಉಪಯುಕ್ತವಾಗಿದೆ ಎಂದು ತಿಳಿಸಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ಬಿ.ಹಚಡದ, ಪ್ರೊ.ಆರ್.ಕೆಂಗನಾಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.