ಶನಿವಾರ, ಮೇ 15, 2021
22 °C

ಹೊಸ ಮರಳು ನೀತಿ ಕರಡು ಸಿದ್ದ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಹೊಸ ಮರಳು ನೀತಿ ಕರಡು ಸಿದ್ಧಪಡಿಸಲಾಗಿದ್ದು, ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಕಳುಹಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮರಳು ನೀತಿಗೆ ಅಭಿಪ್ರಾಯ ಪಡೆದ ನಂತರ ಶೀಘ್ರದಲ್ಲಿಯೇ ಹೊಸ ಮರಳು ನೀತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಲ್ಲಿ ಕ್ರಷರ್‌ಗಳು ಬಂದ ಆಗಬಾರದು, ಮಾರುಕಟ್ಟೆಯಲ್ಲಿ ವಸ್ತುಗಳ ಕೊರತೆ ಆಗಬಾರದು ಹಾಗೂ ಕ್ರಷರ್‌ಗಳು ಸುಲಲಿತವಾಗಿ ನಡೆಯಬೇಕು ಎಂದರು.

ನೂತನ ಗಣಿ ಮತ್ತು ನೂತನ ಮರಳು ನೀತಿ ಹಾಗೂ ನೂತನ ಗಣಿ ಅದಾಲತ್ ಬಗ್ಗೆಯೂ ರಾಜ್ಯಮಟ್ಟದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು