ನಿಡಗುಂದಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಂ ಧರ್ಮೀಯರು ಗುರುವಾರ ಬಕ್ರೀದ್ ಅನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಪ್ರಮುಖ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ಸಲ್ಲಿಸಿದರು. ಈದ್ ಸಂದೇಶ ಹಾಗೂ ಧಾರ್ಮಿಕ ಪ್ರವಚನಗಳನ್ನು ಆಲಿಸಿ, ಪರಸ್ಪರ ಆಲಂಗಿಸಿಕೊಳ್ಳುವ ಮೂಲಕ ಶುಭ ಕೋರಿದರು.

ಜಾಮೀಯಾ ಮಸೀದಿ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಮುಸ್ಲಿಮರು ‘ತಕಬೀರಾ’ ಪಠಣ ಮಾಡುತ್ತ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಬಳಿಕ ಈದ್ಗಾ ಮೈದಾನದಲ್ಲಿ ಜಮಾಯಿಸಿ ವಿಶ್ವಶಾಂತಿ ಮತ್ತು ಸೌಹಾರ್ದಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಧಾರ್ಮಿಕ ಗುರುಗಳಾದ ಮೌಲಾನಾ ಆಸಿಫ್ ಚಪ್ಪರಬಂದ ಸಾಮೂಹಿಕ ಪ್ರಾರ್ಥನೆ ಮಾಡಿಸಿದರು. ಹಾಫಿಜ್ ಜಾಹೀದ ಸೌದಾಗಾರ ಅವರು ಧರ್ಮೋಪದೇಶ ನೀಡಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಎಂ.ಎಮ್. ಮುಲ್ಲಾ, ಪ್ರಮುಖ ಮುಖಂಡರಾದ ಹಾಜಿ ಜಾಕೀರ್ ಬೇಪಾರಿ, ಲಾಲಸಾಬ ಬಾಣಕಾರ, ರಾಜಾಸಾಬ ಬಾಣಕಾರ, ಮೌಲಾಸಾಬ್ ಅತ್ತಾರ, ಅಲಿ ಚಪ್ಪರಬಂದ, ರಮಜಾನ ನದಾಫ್, ರಾಜು ನದಾಫ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-26-361624016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.