ದೇವರಹಿಪ್ಪರಗಿ: ಸಹಕಾರ ಸಂಘ, ಸಂಸ್ಥೆ ಹಾಗೂ ಕ್ಷೇತ್ರದಲ್ಲಿ ಯಾವುದೇ ರಾಜಕಾರಣ ಹಾಗೂ ರಾಜಕೀಯ ಬೆರೆಸುವುದು ಬೇಡ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು.

ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಬುಧವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯ ಸಹಕಾರಿ ಸಂಘಗಳು ದಿನೇ ದಿನೇ ಸಾಕಷ್ಟು ಸಾಧನೆ ಮಾಡುತ್ತಿವೆ. ಇನ್ನೂ ಕೆಲವು ಹಿಂದುಳಿದಿವೆ. ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಶಂಕರಗೌಡ ಪಾಟೀಲರು ಕಟ್ಟಿದ ಸಂಸ್ಥೆ ಇಂದು ಅಮೃತ ಮಹೋತ್ಸವ ಆಚರಣೆಯಲ್ಲಿರುವುದು ಸಂತೋಷದ ವಿಷಯ. ಸಂಘಕ್ಕೆ ತಮ್ಮ ಧರ್ಮಪತ್ನಿಯ ನೆನೆಪಿನಲ್ಲಿ ಜಾಗ ಹಾಗೂ ಸುಸಜ್ಜಿತ ಕಟ್ಟಡ ನಿರ್ಮಿಸಿದ ಇಂದಿನ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲರ ಕಾರ್ಯ ಶ್ಲಾಘನೀಯ ಎಂದರು.

ರೈತರು ಕೃಷಿಯಲ್ಲಿ ವೈಜ್ಞಾನಿಕತೆ ಅಳವಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬಹುದು. ನಾವು ಸಾಧನೆ ಮಾಡಿದ ರೈತರತ್ತ ನೋಡಬೇಕು. ರೈತರ ನೆರವಿಗಾಗಿ ಎಲ್ಲ ಜಿಲ್ಲಾ ಸಹಕಾರಿ ಬ್ಯಾಂಕುಗಳು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿವೆ. ಶೂನ್ಯ ಬಡ್ಡಿದರದ ಸಾಲ ನೀಡಿದ ಮೊದಲ ರಾಜ್ಯವೇ ಕರ್ನಾಟಕ. ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಗಳ 5.5 ಲಕ್ಷ ರೈತರಿಗೆ ₹5 ಸಾವಿರ ಕೋಟಿ ಸಾಲ ನೀಡಲಾಗಿದೆ. ದ್ರಾಕ್ಷಿ, ದಾಳಿಂಬೆ, ಕಬ್ಬು ಬೆಳೆಯುವ ರೈತರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ತೋಟದಲ್ಲಿ ಮನೆ ನಿರ್ಮಿಸುವ ರೈತರಿಗೆ ₹15 ರಿಂದ ₹20 ಲಕ್ಷ ಸಾಲ ನೀಡುವ ಯೋಜನೆ ರೂಪಿಸಲಾಗಿದೆ. ಜೊತೆಗೆ ಹೈನುಗಾರಿಕೆಯಡಿ ಎಮ್ಮೆ, ಆಕಳು ಸಾಲ ನೀಡಲಾಗುವುದು ಎಂದರು.

ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಮಾತನಾಡಿ, ನಮ್ಮ ಜಿಲ್ಲೆಯ ಎಲ್ಲ ಸಹಕಾರ ಸಂಘ, ಸಂಸ್ಥೆಗಳು ಉತ್ತಮ ಸ್ಥಿತಿಯಲ್ಲಿವೆ ಎಂಬುವುದು ಹೆಮ್ಮೆಯ ವಿಷಯ ಎಂದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹಾಗೂ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಖಂಡ ಸಿಂದಗಿ ತಾಲ್ಲೂಕಿನ ಎಲ್ಲ ಪಿಕೆಪಿಎಸ್ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಡಗಂಚಿ ಕಟ್ಟಿಮಠದ ವೀರಭದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸೋಮೇಶ್ವರ ದೇವಸ್ಥಾನ ಸಂಸ್ಥೆಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ, ಮುಳಸಾವಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಆಕಳವಾಡಿ, ಉಪಾಧ್ಯಕ್ಷೆ ಕಸ್ತೂರಿಬಾಯಿ ಹೊಸಟ್ಟಿ, ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್.ಪಾಟೀಲ(ಯಾಳಗಿ), ಕಲ್ಲನಗೌಡ ಪಾಟೀಲ, ಗುರುಶಾಂತ ನಿಡೋಣಿ, ಸುರೇಶ ಬಿರಾದಾರ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಕೆ.ಎಚ್.ವಡ್ಡರ, ಡಿಸಿಸಿ ಬ್ಯಾಂಕ್ ಸಿಇಓ ಎಸ್.ಎ.ಢವಳಗಿ, ಸಿಂದಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಲೀಲಾವತಿಗೌಡ, ಸಿಂದಗಿ ಡಿಸಿಸಿ ಬ್ಯಾಂಕ್ ನೋಡಲ್ ಅಧಿಕಾರಿ ಎಂ.ಎಚ್.ಹತ್ತಿ, ಸ್ಥಳೀಯ ಸಂಘದ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಆರ್.ಎಮ್.ಬಣಗಾರ ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.