ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಯಸ್ಸಾಗಿಲ್ಲ, ರಾಜಕೀಯ ನಿವೃತ್ತಿ ಇಲ್ಲ: ಜಿಗಜಿಣಗಿ

Last Updated 12 ಆಗಸ್ಟ್ 2022, 14:01 IST
ಅಕ್ಷರ ಗಾತ್ರ

ವಿಜಯಪುರ: ‘ನನಗಿನ್ನೂ ವಯಸ್ಸಾಗಿಲ್ಲ. ಸಚಿವ ಗೋವಿಂದ ಕಾರಜೋಳ ಅವರಿಗಿಂತ ವಯಸ್ಸಿನಲ್ಲಿ ಚಿಕ್ಕವನು. ಹೀಗಾಗಿರಾಜಕೀಯದಿಂದ ನಾನು ಸದ್ಯ ನಿವೃತ್ತನಾಗುವುದಿಲ್ಲ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನನಗೆ ಅನಿವಾರ್ಯವಲ್ಲ. ಅಂತಹ ಮಹತ್ವಾಕ್ಷಾಂಕ್ಷೆಗಳೂ ಇಲ್ಲ. ಈ ಬಾರಿ ವಿಧಾನಸಭಾ ಚುನಾವಣೆಗೆ ನಿಲ್ಲು ಎಂದರೆ ಸ್ಪರ್ಧಿಸುತ್ತೇನೆ. ಇಲ್ಲವೇ, ದಿಲ್ಲಿಗೆ ಬಾ ಎಂದರೆ ಅಲ್ಲಿಗೆ ಹೋಗುವೆ, ಮನೆಯಲ್ಲೇ ಇರು ಎಂದರೆ ಇರಲು ಸಿದ್ಧನಿದ್ದೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ದನಿದ್ದೇನೆ ಎಂದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಲಂಚ, ಮಂಚದ ಸರ್ಕಾರ’ ಎಂಬ ಕಾಂಗ್ರೆಸ್‌ ಶಾಸಕ ಪ್ರಿಯಾಂಕಾ ಖರ್ಗೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಜಿಗಜಿಣಗಿ, ಅವರಪ್ಪನ ಆಡಳಿತದಲ್ಲಿ ಏನೆಲ್ಲ ನಡೆದಿದೆ ಎಂಬುದು ನಮಗೆ ಗೊತ್ತಿದೆ. ಅದನೆಲ್ಲ ಹೇಳುವುದು ಸರಿಯಲ್ಲ. ಟೀಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹಾಪೂಹ. ಕಾಂಗ್ರೆಸ್ ಮತ್ತು ಮಾಧ್ಯಮಗಳ ಸೃಷ್ಟಿ. ಇದಕ್ಕೆ ಕಿವಿಗೊಡುವ ಅಗತ್ಯವಿಲ್ಲ ಎಂದು ಹೇಳಿದರು.

ತ್ರಿವರ್ಣ ಧ್ವಜ ಹಾರಿಸಲು ಮನವಿ:

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಕರೆ ನೀಡಿದ್ದು, ಎಲ್ಲರೂ ಈ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದುಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ನಮಗೆ ಸಾಧ್ಯವಾಗಿಲ್ಲ. ಆದರೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯಲ್ಲಿ ನಾವಿರುವುದು ಅದೃಷ್ಟ ಎಂದು ಹೇಳಿದರು.

ದೇಶದ ಜನರು ಅಮೃತ ಮಹೋತ್ಸವ ಆಚರಣೆಗೆ ಸಜ್ಜಾಗಿದ್ದಾರೆ. ದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಮೂಡಿದೆ. ಪ್ರತಿಯೊಬ್ಬರೂ ರಾಷ್ಟ್ರಧ್ವಜ ಹಾರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಕವಟಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮುಖಂಡರಾದ ಶಿವರುದ್ರ ಬಾಗಲಕೋಟಿ, ಬಸವರಾಜ ಬಿರಾದಾರ, ಸುರೇಶ ಬಿರಾದಾರ, ವಿಜಯ್‌ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT