ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆಗೆ ಸೂಚನೆ

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್
Last Updated 18 ನವೆಂಬರ್ 2020, 15:30 IST
ಅಕ್ಷರ ಗಾತ್ರ

ವಿಜಯಪುರ: ನಗರ ಸ್ಥಳಿಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಫಾಯಿ ಕರ್ಮಾಚಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

1993ರ ಹಿಂದಿನಿಂದಲೂ ಇರುವ ನೈಜ ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ, ದೃಢೀಕರಿಸಿ ಪ್ರಮಾಣ ಪತ್ರದ ಜೊತೆಗೆ ಸರ್ಕಾರದ ಸೌಲಭ್ಯಗಳು ಸಕಾಲಕ್ಕೆ ದೊರಕಿಸುವಂತೆ ಸೂಚನೆ ನೀಡಿದರು.

ಮಲ ಹೊರುವ ಪದ್ಥತಿ (ಮ್ಯಾನ್ಯುವಲ್ ಸ್ಕ್ಯಾವೆಂಜರ್) ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅರ್ಹ ಪೌರ ಕಾರ್ಮಿಕರಿಗೆ ಮಾತ್ರ ವೇತನ ನೇರ ಪಾವತಿಯಾಗಬೇಕು. ಪೌರಕಾರ್ಮಿಕರಿಗೆ ಸುರಕ್ಷಿತ ಸಾಧನ ಸಲಕರಣೆಗಳು ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.

ಸಫಾಯಿ ಕರ್ಮಚಾರಿಗಳ ಮತ್ತು ಪೌರ ಕಾರ್ಮಿಕರನ್ನು ಸಮರ್ಪಕವಾಗಿ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ದಾಖಲಾತಿಗಳ ಸೂಕ್ತ ಪರಿಶೀಲನಾ ಆಧಾರದ ಮೇಲೆ ಅರ್ಹರಿಗೆ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ಪುನರ್ ವಸತಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT