ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗಾಗಿ ಪ್ರತ್ಯೇಕ ಐಸಿಯು ಸ್ಥಾಪನೆಗೆ ಸೂಚನೆ

Last Updated 3 ಜೂನ್ 2021, 16:28 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹೆಚ್ಚು ತಗಲುವ ಸಾಧ್ಯತೆ ಇರುವುದರಿಂದ ಮಕ್ಕಳಿಗಾಗಿಯೇ ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್‌ಗಳ ಪ್ರತ್ಯೇಕ ತೀವ್ರ ನಿಗಾ ಚಿಕಿತ್ಸಾ ಘಟಕ(ಐಸಿಯು) ಸ್ಥಾಪನೆ ಮಾಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.

ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಕೋವಿಡ್‌ ಮೂರನೇ ಅಲೆಯ ಪೂರ್ವಸಿದ್ಧತೆ ಬಗ್ಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ವೈದ್ಯರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮುಂದಿನ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಕ್ಸಿಜನ್ ಸಿಲಿಂಡರ್‌ಗಳನ್ನು ಖರೀದಿ ಮಾಡಿ ಇಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.

ಹೊಸದಾಗಿ ಅಳವಡಿಸಲಿರುವ 13 ಕೆ.ಎಲ್ ಸಾಮರ್ಥ್ಯದ ಆಮ್ಲಜನಕ ಘಟಕವನ್ನು ಯಾವ ಸ್ಥಳದಲ್ಲಿ ಸ್ಥಾಪಿಸುವುದು ಸೂಕ್ತ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳು ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಇತರ ವೈದ್ಯರೊಂದಿಗೆ ಚರ್ಚಿಸಿದರು.

ಜಿಲ್ಲಾ ಆಸ್ಪತ್ರೆಗೆ ಪೂರೈಕೆಯಾದ ಆಕ್ಸಿಜನ್ ಕಾನ್ಸಟ್ರೇಟರ್ಸ್‌ ಬಳಕೆಯ ಬಗ್ಗೆ ವೈದ್ಯರೊಂದಿಗೆ ಪರಿಶೀಲನೆ ನಡೆಸಿದರು.

ಕೊರೊನಾ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಶರಣಪ್ಪ ಕಟ್ಟಿ, ಡಾ.ಲಕ್ಕಣ್ಣವರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT