ಶುಕ್ರವಾರ, ಏಪ್ರಿಲ್ 16, 2021
20 °C

ಕೈಗಾರಿಕಾ ನಿವೇಶನ ಹಂಚಿಕೆಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ಮುಳವಾಡ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾದ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ನಿರ್ವಹಣಾಧಿಕಾರಿ ಎನ್. ಶಿವಶಂಕರ್, ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 3239  ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದು, ಮೊದಲನೇ ಹಂತದಲ್ಲಿ 564 ಎಕರೆ ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು.

307 ಎಕರೆ ಜಾಗದಲ್ಲಿ 147 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈಗಾಗಲೇ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಲಾಗಿದೆ ಮತ್ತು ರೋಣಿಹಾಳ ಸಬ್‍ಸ್ಟೇಷನ್ ಮೂಲಕ 5 ಮೆಗಾವ್ಯಾಟ್ ವಿದ್ಯುತ್ ಕಾಮಗಾರಿ ಪ್ರಗತಿ ಹಂತದಲ್ಲಿರುವದಾಗಿ ತಿಳಿಸಿದರು.

ಮೂಲಭೂತ ಸೌಕರ್ಯಗಳಾದ ರಸ್ತೆ ನೀರು ಒಳಚರಂಡಿ ವಿದ್ಯುತ್ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರ ಶೆಟ್ಟರ್, ಇದು ರಾಜ್ಯದಲ್ಲಿಯೇ ಇದುವರೆಗೆ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ ಹಂಚಿಕೆ ಮಾಡುತ್ತಿರುವ ಮೊದಲ ಕೈಗಾರಿಕಾ ಪ್ರದೇಶ ಎಂದರು.

ನಿವೇಶನಗಳ ಹಂಚಿಕೆಗಾಗಿ ಸ್ವೀಕರಿಸಲಾದ ಅರ್ಜಿಗಳನ್ನು ನಿಯಮಾನುಸಾರ ಅರ್ಹ ಫಲಾನುಭವಿಗಳಿಗೆ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಮೂಲಕ ಕೂಡಲೇ ಹಂಚಿಕೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ನಂತರ ವಿಜಯಪುರದ ಮಹಾಲ ಬಾಗಾಯತ್ ಹಾಗೂ ಅಲಿಯಾಬಾದ್‌ ಪ್ರದೇಶಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಕೈಗಾರಿಕಾ ಪ್ರದೇಶದ ಮಯೂರ್ ಇಂಡಸ್ಟ್ರೀಸ್, ಪಂಚಮ್ ಇಂಡಸ್ಟ್ರೀಸ್ ಹಾಗೂ ರಾಜಗುರು ಫುಡ್ಸ್ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಎ.ಎಸ್ ಪಾಟೀಲ ನಡಹಳ್ಳಿ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್, ಎನ್. ಶಿವಶಂಕರ್, ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಉದ್ದಿಮೆದಾರರು ಉಪಸ್ಥಿತರಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು