ವಿಜಯಪುರ: ಸಿಂದಗಿ ತಾಲ್ಲೂಕಿನ ಮೋರಟಗಿ ಚೆಕ್ ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹಾಗೂ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಅವರು ಬುಧವಾರ ಭೇಟಿ, ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ನಲ್ಲಿನ ಸಿ.ಸಿ.ಟಿ.ವಿ ದೃಶ್ಯಾವಳಿ ವೀಕ್ಷಿಸಿ, ಅಕ್ರಮವಾಗಿ ಮರಳು ತುಂಬಿದ ವಾಹನಗಳು ಚೆಕ್ ಪೋಸ್ಟ್ ಮೂಲಕ ದಾಟಿ ಹೋಗದಂತೆ ಕ್ರಮ ವಹಿಸಲು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಬಗಲೂರ ಗ್ರಾಮದ ಮೂಲಕ ಘತ್ತರಗಿ ಸೇತುವೆಯನ್ನು ವೀಕ್ಷಣೆ ಮಾಡಿದ ಅವರು ನಂತರ ದೇವಣಗಾಂವ ಗ್ರಾಮದ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವಣಗಾಂವ ಗ್ರಾಮದ ಭೀಮಾ ನದಿ ದಂಡೆಯಲ್ಲಿ ಈಗಾಗಲೇ ವಶಪಡಿಸಿಕೊಂಡ ಅಕ್ರಮ ಮರಳನ್ನು ವೀಕ್ಷಿಸಿದರು. ₹5 ಲಕ್ಷ ಮೌಲ್ಯದ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು.

ಇಂಡಿ ತಾಲ್ಲೂಕಿನಲ್ಲಿ ಈವರೆಗೆ ₹ 17 ಲಕ್ಷ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ತಿಂಗಳಲ್ಲಿ ಒಟ್ಟು 8 ಪ್ರಕರಣ ದಾಖಲಿಸಲಾಗಿದೆ. ಫೆಬ್ರುವರಿಯಲ್ಲಿ 3 ಹಾಗೂ ಮೇನಲ್ಲಿ 5 ಪ್ರಕರಣ ದಾಖಲಿಸಲಾಗಿದೆ. 5 ವಾಹನಗಳನ್ನು ಸೀಜ್ ಮಾಡಲಾಗಿದ್ದು, 3,344 ಟನ್ ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದರು.

ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕಟ್ಟುನಿಟ್ಟಿನ ಸೂಚನೆ ನೀಡಿದರು.

ಮರಳು ವಶ: ಬಬಲೇಶ್ವರ ತಾಲ್ಲೂಕಿನ ಚಿಕ್ಕ ಗಲಗಲಿ ಕಡೆಯಿಂದ ಬಬಲೇಶ್ವರ ಕಡೆಗೆ ಮೂರು ಟಿಪ್ಪರ್ಗಳ ಮೂಲಕ ಒಟ್ಟು 5 ಬ್ರಾಸ್ (14 ಕ್ಯೂಬಿಕ್ ಮೀಟರ್) ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಹಶೀಲ್ದಾರ್ ಸಂಜೀವ ಕುಮಾರ್ ದಾಸರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಚಿದಂಬರ, ಸಿಂದಗಿ ಪಿ.ಎಸ್.ಐ. ಸಂಗಮೇಶ ಹೊಸಮನಿ ಹಾಗೂ ಆಲಮೇಲ ಪಿ.ಎಸ್.ಐ ಸುರೇಶ್ ಗಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.