ಬುಧವಾರ, ಜೂನ್ 29, 2022
24 °C

ವಿಜಯಪುರ: ಸಾಲ ವಸೂಲಾತಿ ಮಾಡದಿರಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಹಾಗೂ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯರು ಪಡೆದಿರುವ ಸಾಲವನ್ನು   ಒತ್ತಾಯ ಪೂರ್ವಕವಾಗಿ ಹಾಗೂ ಕಿರುಕುಳ ನೀಡುವ ಮೂಲಕ ವಸೂಲಾತಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ ಆಗುವವರೆಗೆ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳು, ಸಹಕಾರಿ ಹಾಗೂ ಸೌಹಾರ್ದ ಕಾನೂನು ಪ್ರಕಾರ ಸಾಲ ವಸೂಲಾತಿಗೆ ಕ್ರಮ ಕೈಗೊಳ್ಳುವಂತಿಲ್ಲ. ತಪ್ಪಿದಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಲಾಭದಲ್ಲಿರುವ ಸಂಸ್ಥೆಗಳ ಮೂಲಕ ಸಂಕಷ್ಟದಲ್ಲಿರುವ ಕಾರ್ಯಕರ್ತರಿಗೆ ಹಾಗೂ ತೊಂದರೆ ಇರುವ ಕುಟುಂಬದ ಸದಸ್ಯರಿಗೆ ದಿನಸಿ ವಸ್ತುಗಳ ವಿತರಣೆ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು