ಶುಕ್ರವಾರ, ಆಗಸ್ಟ್ 7, 2020
28 °C

ವಿಜಯಪುರ: ನೀರು ಹರಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಜುಲೈ 21ರಿಂದ ನೀರು ಹರಿಸಲು ಪ್ರಾರಂಭಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

2020–21ನೇ ಸಾಲಿನ ಕಾಲುವೆ ಜಾಲದ ಕ್ಲೋಜರ್‌ ಕಾಮಗಾರಿಯನ್ನು ಜುಲೈ 20ರೊಳಗಾಗಿ ಪೂರ್ಣಗೊಳಿಸಿ ನೀರು ಒದಗಿಸುವಂತೆ ಅವರು ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಸ್ಥಗಿತವಾಗುವವರೆಗೆ ಕಾಲುವೆಗೆ ನೀರು ಹರಿಸಲು ಹಾಗೂ ಒಳಹರಿವು ಸ್ಥಗಿತವಾದ ನಂತರ ಹಿಂಗಾರಿಗೆ ನಾರಾಯಣಪುರ ಜಲಾಶಯದ ಕಾಲುವೆಯಿಂದ 14 ದಿನ ಚಾಲು, 8 ದಿನ್‌ ಬಂದ್‌ ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ 8 ದಿನ ಚಾಲು, 7 ದಿನ ಬಂದ್ ಪದ್ಧತಿಯನ್ನು ಅನುಸರಿಸಿ ನೀರು ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು