ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಯಕ ತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯ’ 

ನುಲಿಯ ಚಂದಯ್ಯ ಜಯಂತಿ ಆಚರಣೆ
Published 8 ಸೆಪ್ಟೆಂಬರ್ 2023, 4:56 IST
Last Updated 8 ಸೆಪ್ಟೆಂಬರ್ 2023, 4:56 IST
ಅಕ್ಷರ ಗಾತ್ರ

ವಿಜಯಪುರ: ‘ತಮ್ಮ ವಚನಗಳ ಮೂಲಕ ಕಾಯಕ ತತ್ವವನ್ನು ಸಾರಿದ ಶ್ರೇಷ್ಠ ವಚನಕಾರ ನುಲಿಯ ಚಂದಯ್ಯ ಯಾವುದೇ ಕಾಯಕವನ್ನು ಭಾವಶುದ್ಧವಾಗಿ ಹಾಗೂ ಅಂತಃಕರುಣೆಯ ಮೂಲಕ ಮಾಡಬೇಕೆಂಬುದು ಸಾರಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘12ನೇ ಶತಮಾನದ ದಾರ್ಶನಿಕರಾದ ಬಸವಣ್ಣನವರ ಸಮಕಾಲಿನ ಶರಣರಾದ ನುಲಿಯ ಚಂದಯ್ಯ ಅವರು ರಚಿಸಿರುವ ಕಾಯಕ ಮತ್ತು ದಾಸೋಹದಂತಹ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ಹಾಗಾಗಿ ಅವರ ಜೀವನಾದರ್ಶಗಳನ್ನು ನಮ್ಮ ಬದುಕಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಉಪನ್ಯಾಸ ನೀಡಿದ ಪರಮೇಶಪ್ಪ ಕೊರವರ, ವಿಜಯಪುರ ಜಿಲ್ಲೆಯ ಶಿವಣಗಿ ಚಂದಯ್ಯನ ಹುಟ್ಟೂರು. ಬಸವಾದಿ ಶರಣರೊಂದಿಗೆ ಅನುಭವ ಮಂಟಪದಲ್ಲಿದ್ದ ಶರಣ ಚಂದಯ್ಯ ಉಳವಿ, ಶಿವಮೊಗ್ಗ, ಎಣ್ಣೆಹೊಳೆ, ನಂದಿಗ್ರಾಮ, ಶಾಂತಿಸಾಗರ, ಬೆಂಕಿಕೆರೆ ಮಾರ್ಗವಾಗಿ ದುಮ್ಮಿಗೆ ಬರುತ್ತಾರೆ. ಚಂದಯ್ಯ ಅವರು ಹುಲ್ಲನ್ನು ತಂದು ಹಗ್ಗ ನುಲಿಯುವ ಜೊತೆಗೆ ಅದರಿಂದ ಇತರ ಪರಿಕರಗಳನ್ನು ಮಾಡುವ ಕಾಯಕ ನಿರಂತರವಾಗಿತ್ತು. ಕಾಯಕ ನಿಷ್ಠೆಯೇ ಮೇಲು ಎಂದು ಸಾರಿದವರು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅನುಸೂಯ ಚಲವಾದಿ, ಕೃಷಿ ಇಲಾಖೆಯ ಅಧಿಕಾರಿ ಗೀತಾ ಭಜಂತ್ರಿ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶಿವಪುತ್ರಪ್ಪ ಭಜಂತ್ರಿ, ಗೋವಿಂದರಾವ ಭಜಂತ್ರಿ, ಧರ್ಮರಾಜ ದೊಡ್ಡಣ್ಣ ಭಜಂತ್ರಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮಿರೇಕರ, ಎಚ್.ಎ.ಮಮದಾಪೂರ ಇದ್ದರು. 

ಕಲ್ಯಾಣ ನಾಡಿನ ಶ್ರೇಷ್ಠ ಶರಣ ಅನುಭಾವಿ ವಚನಕಾರ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ಅಪಾರ. ಅಂತಹ ಮಹಾನ್ ಶರಣರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ
ಮಹದೇವ ಮುರಗಿ, ಹೆಚ್ಚುವರಿ ಜಿಲ್ಲಾಧಿಕಾರಿ

ಸಿದ್ದಪ್ಪ ಮೇಲಿನಮನಿ, ಶೃತಿ ಮೇಲಿನಮನಿ ಹಾಗೂ ಸಂಗಡಿಗರು ವಚನ ಗಾಯನ ಪ್ರಸ್ತುತಪಡಿಸಿದರು.

ಮೆರವಣಿಗೆಗೆ ಚಾಲನೆ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ನುಲಿ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು. ಮೆರವಣಿಗೆಯು ಕಲಾ ತಂಡದೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಕನಕದಾಸ ವೃತ್ತದಿಂದ ಆಗಮಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಪ್ತಿಗೊಂಡಿತು.

ಕಲ್ಯಾಣ ನಾಡಿನ ಶ್ರೇಷ್ಠ ಶರಣ ಅನುಭಾವಿ ವಚನಕಾರ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ಅಪಾರ. ಅಂತಹ ಮಹಾನ್ ಶರಣರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಮಹದೇವ ಮುರಗಿ ಹೆಚ್ಚುವರಿ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT