ಸೋಮವಾರ, ಜುಲೈ 4, 2022
24 °C

ನಿವೃತ್ತಿಗೆ ಬಿಸಿಯೂಟ ಕಾರ್ಮಿಕರ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಿವೃತ್ತಿ ಅಂಚಿನಲ್ಲಿರುವ ಬಿಸಿಯೂಟ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ಕರ್ನಾಟಕ ರಾಜ್ಯ ಘಟಕ,ಆಲ್ ಇಂಡಿಯಾ ಯುನೈಟೆಡ್ ಟ್ರೇಡ್  ಯೂನಿಯನ್ ಸೆಂಟರ್‌ನಿಂದ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

ಯಾವುದೇ ಪರಿಹಾರ ನೀಡದೇ 12 ಸಾವಿರ ಅಕ್ಷರ ದಾಸೋಹ ಕಾರ್ಮಿಕರನ್ನು ನಿವೃತ್ತಿಗೊಳಿಸಿ ಹೊರಡಿಸಿರುವ ಸರ್ಕಾರದ ಆದೇಶನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರಿಗೆ ಜೀವನ ಯೋಗ್ಯ ನಿವೃತ್ತಿ ವೇತನ ಅಥವಾ ಕನಿಷ್ಠ ₹ 5 ಲಕ್ಷ ಇಡಿಗಂಟು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರು ಇಚ್ಚಿಸಿದಲ್ಲಿ ಅವರನ್ನೇ ಕೆಲಸದಲ್ಲಿ ಮುಂದುವರೆಸಿ, ಅಂಗನವಾಡಿ ಮಾದರಿಯಂತೆ ಅವರ ಹುದ್ದೆಯಲ್ಲಿ ಅವರ ಕುಟುಂಬದ ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಎ.ಐ.ಯು.ಟಿ.ಯು.ಸಿ. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ  ಮಾತನಾಡಿ, 20 ವರ್ಷಗಳಿಂದ ಪುಡಿಗಾಸಿನ ವೇತನ ನೀಡಿ ದಿನವಿಡಿ ಸೇವೆ ತೆಗೆದುಕೊಂಡು ದಿಢೀರನೇ ಯಾವುದೇ ಪರಿಹಾರ ಇಲ್ಲದೆ ಬಿಸಿಯೂಟ ಕಾರ್ಯಕರ್ತೆಯರನ್ನು ಮನೆಗೆ ಕಳುಹಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿದರು. 

ಜಿಲ್ಲಾ ಸಂಚಾಲಕರಾದ ಶಶಿಕಲಾ ಮ್ಯಾಗೇರಿ ಮಾತನಾಡಿ, ಇದೀಗ ನಮ್ಮನ್ನು ರಾಜ್ಯ ಸರ್ಕಾರವು 60 ವರ್ಷವಾಗಿವೆ ಎಂಬ ನೆಪವೊಡ್ಡಿ ಯಾವುದೇ ಪರಿಹಾರ ನೀಡದೇ ನಿವೃತ್ತಿ ಹೆಸರಿನಲ್ಲಿ ಸುಮಾರ 12ಸಾವಿರ ಬಿಸಿಯೂಟ ಕಾರ್ಮಿಕರನ್ನು ಮನೆಗೆ ಕಳಿಸಲು ಆದೇಶ ನೀಡಿದೆ. ಈ ಸರ್ಕಾರದ ನೀತಿಯನ್ನು ಇಡೀ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟಿಸಬೇಕು ಎಂದರು.

ಸಹಸಂಚಾಲಕರಾದ  ಬಸಮ್ಮ ಬೋಳಿ, ಬಾನು ಕಲಾದಗಿ, ಕಮಲಾಬಾಯಿ ಪಾಟೀಲ, ಹಣಮವ್ವ ಛತ್ರಿ, ಸುನಂದಾ ಪರಡಿಮಠ, ಸಾವಿತ್ರಿ ನಾಟೀಕರ, ಸಾವಿತ್ರಿ ಕಾಮನಕೇರಿ, ರಾಜಬಿ ಚಪ್ಪರಬಂದ, ಚೆನ್ನಮ್ಮ ಪೆಂಟದ  ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು