ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಇಲಾಖೆಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ

Last Updated 12 ಮೇ 2021, 16:59 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತಕ್ಕೆಬುಧವಾರಪೊಲೀಸ್ ಇಲಾಖೆಯಿಂದ ಕೊಡ ಮಾಡಿದನಾಲ್ಕುಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಅವರು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಅವರಿಗೆ ಹಸ್ತಾಂತರಿಸಿದರು.

ಕೋವಿಡ್-19 ಎರಡನೇ ಅಲೆಯುದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆಯು ಉಂಟಾಗುತ್ತಿದೆ. ವಿವಿಧ ಸಂಘ-ಸಂಸ್ಥೆಗಳು ಆಕ್ಸಿಜನ್ ಅನ್ನು ಒದಗಿಸುವಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದು. ಇಂತಹ ಸಂಘ-ಸಂಸ್ಥೆಗಳಲ್ಲಿ

ಬೆಂಗಳೂರಿನ ಖಾಸಗಿಕಂಪನಿಯೊಂದು ಸಿಎಸ್ಆರ್ ಯೋಜನೆಯ ಅಡಿಯಲ್ಲಿ ಎಸಿಬಿಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರಿಗೆ ನೀಡಿದ ಕಾನ್ಸಂಟ್ರೇಟರ್ ಗಳನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ನೀಡಲಾಗಿದೆ. ಅದರಂತೆ, ಈ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಅರಿಸಿದ್ದಿ, ಜಿಲ್ಲಾ ಶಸ್ತ್ರಚಿಕಿತ್ಸಕಶರಣಪ್ಪ ಕಟ್ಟಿ, ಡಾ.ಲಕ್ಕಣ್ಣವರ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT