ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ಯಾರಾಮೆಡಿಕಲ್ ಕೋರ್ಸ್: ಬಡ ವಿದ್ಯಾರ್ಥಿಗಳಿಗೆ ಅನುಕೂಲ’

Last Updated 10 ನವೆಂಬರ್ 2020, 14:49 IST
ಅಕ್ಷರ ಗಾತ್ರ

ವಿಜಯಪುರ:ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ಯಾರಾಮೆಡಿಕಲ್ ಕೋರ್ಸ್‌ ತುಂಬಾ ಉಪಯುಕ್ತವಾಗಿದೆ ಮತ್ತು ಜೀವನದಲ್ಲಿ ಆರ್ಥಿಕ ಸ್ಥಿರತೆ ಬರುತ್ತದೆ ಎಂದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ನಗರದ ಶ್ರೀ ಶರಣ ಬಸವೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಗ್ಲೋಬಲ್‌ ಹೆಲ್ತ್‌ ಕೇರ್‌ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕ್ಯಾಂಪಸ್‌ ಸಂದರ್ಶನ, ಉದ್ಯೋಗ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಗಿನ ಕೋವಿಡ್‌ ಸಂದಿಗ್ಧ ಪರಿಸ್ಥಿತಿಯಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ(ಪ್ಯಾರಾಮೆಡಿಕಲ್) ತುಂಬಾ ಮಹತ್ವದ ಪಾತ್ರ ವಹಿಸುತ್ತಾರೆ ಹೇಳಿದರು.

ಗ್ಲೋಬಲ್‌ ಹೆಲ್ತ್‌ ಕೇರ್‌ ಅಕಾಡೆಮಿಯ ನೇಮಕ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಳಿವಾಡ, ವಿದ್ಯಾರ್ಥಿಗಳು ಉದ್ಯೋಗ ದೊರಕಿಸಿಕೊಳ್ಳಲು ತಮ್ಮ ಕೌಶಲ, ಸಾಮರ್ಥ್ಯ ಮತ್ತು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ಲೋಬಲ್‌ ಹೆಲ್ತ್‌ ಕೇರ್‌ ಅಕಾಡೆಮಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾಮಚಂದ್ರ ಕೌಲಗಿ ಮಾತನಾಡಿ, ವೈದ್ಯಕೀಯ ವಿಭಾಗದಲ್ಲಿ ಪ್ಯಾರಾಮೆಡಿಕಲ್‌ ಸಿಬ್ಬಂದಿ ಕೊರತೆ ಇರುವುದರಿಂದ ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶಗಳು ಹೆಚ್ಚಿಗೆ ಇವೆ ಎಂದು ತಿಳಿಸಿದರು.

ಶ್ರೀಶರಣ ಬಸವೇಶ್ವರ ಕಾಲೇಜಿನ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಮಾತನಾಡಿ, ಶರಣ ಬಸವೇಶ್ವರ ಕಾಲೇಜಿನ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಿಗೆ ಕೇವಲ ಒಳ್ಳೆಯ ಶಿಕ್ಷಣವನ್ನೂ ಕೊಡುವುದಷ್ಟೇ ಅಲ್ಲದೇ, ಅವರಿಗೆ ಉದ್ಯೋಗ ದೊರಕಿಸಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದು ಹೇಳಿದರು.

ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೂ ಉದ್ಯೋಗ ದೊರಕಿಸಿ ಕೊಡುವಂತ ಐದು ಡಿಪ್ಲೊಮಾ ಪ್ಯಾರಾ ಮೆಡಿಕಲ್‌ ಕೋರ್ಸ್‌ ಹಾಗೂ ಬಿಎಂಎಲ್‌ಟಿ ಪದವಿ ಕೋರ್ಸ್‌ಗಳಿವೆ ಎಂದರು.

ಶ್ರೀ ಶರಣ ಬಸವೇಶ್ವರ ಕಾಲೇಜಿನ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸಂಪ್ರದಾ ಪಾಟೀಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿಠ್ಠಲ ವಿಜಾಪುರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT