ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ‘ದೇಶಾಭಿಮಾನ, ದೇಶದ ಪ್ರಗತಿ ಬಿಜೆಪಿ ಧ್ಯೇಯ’

Published 22 ಫೆಬ್ರುವರಿ 2024, 16:08 IST
Last Updated 22 ಫೆಬ್ರುವರಿ 2024, 16:08 IST
ಅಕ್ಷರ ಗಾತ್ರ

ವಿಜಯಪುರ: ದೇಶಾಭಿಮಾನ, ದೇಶದ ಪ್ರಗತಿಯನ್ನೇ ಉಸಿರಾಗಿಸಿಕೊಂಡಿರುವ ಹೆಮ್ಮೆಯ ಪಕ್ಷ ಬಿಜೆಪಿ. ಬಿಜೆಪಿಯ ಕಾರ್ಯಕರ್ತ ಎನ್ನುವುದೇ ಒಂದು ಅಭಿಮಾನದ ಸಂಗತಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಮಾತನಾಡಿದರು.

ದೇಶದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಬೇಕಿದೆ ಎಂದರು.

ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಪ್ಪು ಹಣದ ವಿರುದ್ದ ಸಮರ, ಕಿಸಾನ್ ಸಮ್ಮಾನ್ ಮೊದಲಾದ ಯೋಜನೆಗಳು ಜನಸಾಮಾನ್ಯರಿಗೆ ಮುಟ್ಟಿವೆ, ಈ ರೀತಿಯ ಅಭಿವೃದ್ಧಿ ಪರಂಪರೆ ಮುಂದುವರೆಯಲು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಶ್ರಮಿಸಬೇಕು ಎಂದು ಹೇಳಿದರು.

ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ  ವಿವೇಕಾನಂದ ಡಬ್ಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕೋಳಕೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಬು ಮಾಶಾಳ, ಈರಣ್ಣ ರಾವೂರ, ಮಲ್ಲನಗೌಡ ಪಾಟೀಲ, ಮಹಿಳಾ ಮೋರ್ಚ್‌ ಜಿಲ್ಲಾಧ್ಯಕ್ಷೆ ಸಪ್ನಾ ಕಣ್ಮುಚ್ಚಿನಾಳ  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT