ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಧರಿಸದಿದ್ದರೆ ದಂಡ: ವಿಜಯಪುರ ಜಿಲ್ಲಾಧಿಕಾರಿ ಎಚ್ಚರಿಕೆ

Last Updated 2 ಅಕ್ಟೋಬರ್ 2020, 11:56 IST
ಅಕ್ಷರ ಗಾತ್ರ

ವಿಜಯಪುರ: ಸರ್ಕಾರದ ಕೋವಿಡ್ ‌ಅನ್‍ಲಾಕ್–5ರ ಮಾರ್ಗಸೂಚಿ ಪ್ರಕಾರ ಮಾಸ್ಕ್ ಧರಿಸದೆ ಇರುವ ಮತ್ತು ಪರಸ್ಪರ ಅಂತರವನ್ನು ಕಾಯ್ದುಕೊಳ್ಳದೇ ಇರುವವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹1 ಸಾವಿರ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶವನ್ನು ಹೊರತುಪಡಿಸಿ ಅಂದರೆ, ಜಿಲ್ಲೆಯ ಇತರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ₹ 500 ದಂಡವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಠ 6 ಅಡಿಗಳ ದೈಹಿಕ ಅಂತರವನ್ನು ಕಾಯ್ದುಕೊಳ್ಳದ, ಅಂಗಡಿ, ಮುಂಗಟ್ಟುಗಳ ಮುಂದೆ ಗ್ರಾಹಕರಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳದ, ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವವರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೆ ಇರುವವರಿಂದ ಈ ದಂಡವನ್ನು ವಸೂಲಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಾರ್ವಜನಿಕರು, ವ್ಯಾಪಾರಸ್ಥರು ಪರಸ್ಪರ ಅಂತರ ಮತ್ತು ಮಾಸ್ಕ್ ಧರಿಸುವುದರೊಂದಿಗೆ ಕೋವಿಡ್‌-19 ಸೋಂಕನ್ನು ನಿಯಂತ್ರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT