ಮಂಗಳವಾರ, ಆಗಸ್ಟ್ 3, 2021
23 °C

ವಿಜಯಪುರ | ಕೋವಿಡ್‌ಗೆ ವ್ಯಕ್ತಿ ಸಾವು; ಮತ್ತೆ 39 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕಂಟೈನ್ಮೆಂಟ್ ವಲಯದ ಸಂಪರ್ಕದಿಂದ ಕೋವಿಡ್-19 ತಗುಲಿರುವ ಬಗ್ಗೆ ದೃಢಪಟ್ಟ ನಗರದ ಶಾಪೇಟೆಗಲ್ಲಿಯ 52 ವರ್ಷ ವಯಸ್ಸಿನ ನಿವಾಸಿ (ಪಿ12139) ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆದಲ್ಲಿ ಜೂನ್ 27 ರಂದು ಸಾವನ್ನಪ್ಪಿದ್ದಾರೆ. ಇವರ ಗಂಟಲು ದ್ರವ ಮಾದರಿಯನ್ನು ಈ ಹಿಂದೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಸಾವಿನ ನಂತರ ಬಂದ ವರದಿಯನ್ವಯ ಈ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 10 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಮತ್ತೆ 39 ಜನರಿಗೆ ಕೋವಿಡ್‌: ಗುರುವಾರ ಜಿಲ್ಲೆಯಲ್ಲಿ 39 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 466ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಜನ ಗುಣಮುಖರಾಗಿ ಗುರುವಾರ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಇದುವರೆಗೆ 322 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು