ವಿಜಯಪುರ: ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂದನ, ಡೇ ನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕೌಶಲ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯುವನಿಧಿ ಯೊಜನೆಯಡಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂತಿಮ ವರ್ಷದಲ್ಲಿ ಪದವಿ ಹಾಗೂ ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದು ಎಲ್ಲ ಅರ್ಹ ಫಲಾನುಭವಿಗಳಿಗೆ ಯುವನಿಧಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಅಮೃತ್ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳು ವಿವಿಧ ವೃತ್ತಿಪರ ಚಟುವಟಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಪ್ರತಿಯೊಂದು ಗುಂಪಿಗೆ ಒಂದು ಹೆಸರನ್ನು ಸೂಚಿಸಬೇಕು ಎಂದರು.

ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಆಯುಕ್ತ ವಿಜಕುಮಾರ ಮೆಕ್ಕಳಕಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸಿ.ಬಿ ಕುಂಬಾರ, ಉದ್ಯೋಗ ಮತ್ತು ತರಬೇತಿ ಇಲಾಖೆ ಅಧಿಕಾರಿ ಮಹೇಶ ಮಾಳವಾಡೇಕರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಎಸ್.ವಿ ಪಾಟೀಲ, ಜಿಲ್ಲಾ ಕೈಗಾರಿಕಾ ಉದ್ಯಮಿದಾರರ ಸಂಘದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಉದ್ಯಮಿ ಪೀಟರ್ ಅಲೆಕ್ಸಾಂಡರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.