ಸೋಮವಾರ, ಸೆಪ್ಟೆಂಬರ್ 26, 2022
24 °C

ಕೈದಿಗೆ ಚಿಕನ್ ಪೀಸ್‌ನಲ್ಲಿ ಗಾಂಜಾ ಪೂರೈಕೆ: ಪತ್ತೆ ಹಚ್ಚಿದ ಪೊಲೀಸ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಲ್ಲಿನ ದರ್ಗಾ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗೆ ಚಿಕನ್‌ ಪೀಸ್‌ನಲ್ಲಿ ಗಾಂಜಾ ಅಡಗಿಸಿಟ್ಟು ಪೂರೈಕೆ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಜೈಲಿನಲ್ಲಿರುವ ಕೈದಿಗೆ ನೀಡಲು ತೆಗೆದುಕೊಂಡು ಹೋಗಿದ್ದ ಊಟವನ್ನು ಪರಿಶೀಲಿಸುವಾಗ ಚಿಕನ್ ಪೀಸ್ ಒಳಗೆ  ಗಾಂಜಾವನ್ನು ಹುದುಗಿಸಿಟ್ಟಿರುವುದು ಪತ್ತೆಯಾಗಿದೆ.

ಕೈದಿ ಶಾರುಕ್ ಖಾನ್ ತೊಗರಿತಿಪ್ಪಿ ಎಂಬಾತನಿಗೆ ಪ್ರಜ್ವಲ್ ಎಂಬಾತ ಊಟದೊಂದಿಗೆ ಗಾಂಜಾ ಪೂರೈಕೆ ಮಾಡುವಾಗ ಸಿಕ್ಕಿಬಿದ್ದಿದ್ದಾನೆ.

ದೊಡ್ಡ, ದೊಡ್ಡ ಚಿಕನ್ ಪೀಸ್‌ನಲ್ಲಿ 2 ಗ್ರಾಂನಷ್ಟು ಇರುವ ಗಾಂಜಾ ಇರಿಸಲಾಗಿತ್ತು. ಒಟ್ಟು 18 ಗಾಂಜಾ ಪ್ಯಾಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು