ಶೂಟೌಟ್ ಪ್ರಕರಣ: ಮುಖ್ಯ ಆರೋಪಿ ಮಡಿವಾಳಯ್ಯ ಹಿರೇಮಠ ಬಂಧನ

ವಿಜಯಪುರ: ಕಾಂಗ್ರೆಸ್ ಮುಖಂಡ ಮಹಾದೇವ ಬೈರಗೊಂಡ ಸಾಹುಕಾರ ಅವರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣದ ಮುಖ್ಯ ಆರೋಪಿ ನಗರದ ಇಂಡಿ ರಸ್ತೆಯ ಬಂಬಳ ಅಗಸಿಯ ಮಡಿವಾಳಯ್ಯ ಹಿರೇಮಠ(33) ಎಂಬಾತನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಒಂದು ಕಾರು, ಪಿಸ್ತೂಲ್ ಮತ್ತು ಒಂದು ಸಜೀವ ಗುಂಡು ಮತ್ತು ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ನ.2ರಂದು ಕನ್ನಾಳ ಕ್ರಾಸ್ ಬಳಿ ಸಾಹುಕಾರ ಚಲಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಬಳಿಕ ಪೆಟ್ರೋಲ್ ಬಾಂಬ್ ಎಸೆದು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸಾಹುಕಾರ ಅವರಿಗೆ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆ ಮತ್ತು ಭದ್ರತೆಯ ಉದ್ದೇಶದಿಂದ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.