ಗುರುವಾರ , ಅಕ್ಟೋಬರ್ 21, 2021
28 °C

ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧದ ಪೋಸ್ಟ್‌: ಬೆಂಬಲಿಗರಿಂದ ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರಿ ಸದ್ದು ಮಾಡತೊಡಗಿದೆ.

'ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ' ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಪೋಸ್ಟ್ ಹರಿದಾಡತೊಡಗಿದೆ.

ಈ ಸಂಬಂಧ ಯತ್ನಾಳ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ವಿಜಯಪುರದ ಸೈಬರ್ ( ಸಿಇಎನ್) ಕ್ರೈಂ ಪೊಲೀಸ್ ಠಾಣೆಗೆ ಬುಧವಾರ ಸಂಜೆ ದೂರು ನೀಡಿದ್ದಾರೆ.

'ನಮ್ಮ ಕಾಂಗ್ರೆಸ್' ಇನ್‌ಸ್ಟಾಗ್ರಾಮ್ ಖಾತೆಯ ಪ್ರೊಪೈಲ್‌ನಲ್ಲಿ  ಶಾಸಕ ಯತ್ನಾಳ ಅವರ ಭಾವಚಿತ್ರ ಹಾಗೂ ಅಶ್ಲೀಲ ಬರಹ ಹರಿದಾಡುತ್ತಿದೆ. ಈ ಮೂಲಕ ಶಾಸಕರಿಗೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು