ಶುಕ್ರವಾರ, ಸೆಪ್ಟೆಂಬರ್ 25, 2020
29 °C

ರಾಮಮಂದಿರ ಶಿಲಾನ್ಯಾಸಕ್ಕೆ ವಿರೋಧಿಸಿ ಪೋಸ್ಟ್‌‌: ಯುವಕನಿಗೆ ಚಪ್ಪಲಿ ಏಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿರುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾರಿ ಪೋಸ್ಟ್ ಹಾಕಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರು ಚಪ್ಪಲಿಯಿಂದ ಹೊಡೆದು, ಕ್ಷಮೆ ಕೇಳಿಸಿರುವ ಘಟನೆ ಬಸವನಬಾಗೇವಾಡಿ ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ನಡೆದಿದೆ.

ಯುವಕನಿಂದ ‘ಜೈ ಶ್ರೀರಾಮ್’ ಎಂದು ಘೋಷಣೆ ಹೇಳಿಸಿ, ದೇವರಿಗೆ ಕೈಮುಗಿಯಿಸಿದ್ದಾರೆ.  ಬಳಿಕ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಮುಂದೆ ಈ ರೀತಿ ಮಾಡಬಾರದೆಂದು ಯುವಕನಿಗೆ ಬುದ್ದಿ ಮಾತು ಹೇಳಿ ಬಿಟ್ಟಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನಿಗೆ ಥಳಿಸಿರುವ ಮತ್ತು ಕ್ಷಮೆ ಕೇಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು