ಆಲಮೇಲ: ತಾಲ್ಲೂಕಿನ ಗುಡ್ಡಳ್ಳಿ ಗ್ರಾಮದ ಸಂಜೀವಕುಮಾರ ಲಕ್ಕಪ್ಪ ಹೊಸಮನಿ ಅವರ 3 ಎಕರೆ ಹಾಗೂ ಬಾಗವ್ವ ಲಕ್ಕಪ್ಪ ಹರಿಜನ ಅವರ 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ವಿದ್ಯುತ್ ತಗುಲಿ ಸುಟ್ಟುಹೋಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಸುಮಾರು ₹10 ಲಕ್ಷ ಬೆಳೆ ಹಾನಿಯಾಗಿದೆ ಎನ್ನಲಾಗಿದೆ.
ವಿದ್ಯುತ್ ತಂತಿ ಸರಿಪಡಿಸುವಂತೆ ಹೆಸ್ಕಾಂ ಸಿಬ್ಬಂದಿಗೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಅವರ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಹೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.