ಬಸವನಬಾಗೇವಾಡಿ: ‘ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರಕ್ರಮ ರೂಢಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವಕೃಪಾ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ, ಅಮೋಘಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ನಿವೃತ್ತ ಪಿಎಸ್ಐ ದಿ. ಸಿದ್ದಣ್ಣ ಜಾಲಗೇರಿ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯ ವೀರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ವಿಮಾ ಸಹಕಾರಿ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.
ಪುರಸಭೆಯ ಮಾಜಿ ಅಧ್ಯಕ್ಷ ಜಗದೀಶ್ ಕೊಟ್ರಶೆಟ್ಟಿ, ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿದರು.
ಸಂಗಯ್ಯ ಕಾಳಹಸ್ತೇಶ್ವರಮಠ, ವೈದ್ಯರಾದ ಶ್ವೇತಾ ಶರಣ, ಗುರುರಾಜ ಕುಲಕರ್ಣಿ, ಬಸವರಾಜ್ ವಂದಾಲ, ಗುರುರಾಜ ಗಲಗಲಿ, ಸುನೀಲ ರೂಡಗಿ, ಶ್ವೇತಾರಾಣಿ ರೂಡಗಿ, ದರ್ಶನ ಬಿರಾದಾರ, ಮಹಾಂತೇಶ ಜಾಲಗೇರಿ, ಶಿಕ್ಷಕ ಮಲ್ಲಿಕಸಾಬ ಬಾಗವಾನ, ಸಂಗಣ್ಣ ಕೊಟ್ರಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.