ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಐಎಎಸ್‌, ಐಪಿಎಸ್‌ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನವೆಂಬರ್ 26 ರಂದು

‘ಪ್ರಜಾವಾಣಿ’ಯಿಂದ ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮ
Last Updated 25 ನವೆಂಬರ್ 2021, 15:45 IST
ಅಕ್ಷರ ಗಾತ್ರ

ವಿಜಯಪುರ: ಐಎಎಸ್‌, ಐಪಿಎಸ್‌ ಅಧಿಕಾರಿಯಾಗಬೇಕು ಎಂದು ಕನಸು ಕಾಣುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೀಗ ಸದಾವಕಾಶ ಒದಗಿಬಂದಿದೆ.

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ಕೊಡಿಸಲು ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಮುಂದಾಗಿದೆ.

ಪತ್ರಿಕಾ ಬಳಗವು ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಸಂಸ್ಥೆಯ ಸಹಯೋಗದೊಂದಿಗೆ ಐಎಎಸ್‌, ಐಪಿಎಸ್‌ ಆಕಾಂಕ್ಷಿಗಳಿಗಾಗಿ ನವೆಂಬರ್‌ 26 ರಂದು ಬೆಳಿಗ್ಗೆ 10ರಿಂದ ವಿಜಯಪುರದ ಸ್ಟೇಷನ್‌ ರಸ್ತೆಯಲ್ಲಿರುವ ಕಂದಗಲ್‌ ಹನುಂತರಾಯ ರಂಗ ಮಂದಿರದಲ್ಲಿ ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.

ಜೊತೆಗೆ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕ ವಿನಯ ಕಮಾರ್‌ ಜಿ.ಬಿ. ಅವರು ಸ್ಪರ್ಧಾತ್ಮಕ ಪರೀಕ್ಷೆಗೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಮೇಲೆ ಬೆಳಕು ಚೆಲ್ಲಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಹೆಸರು ನೋಂದಣಿಗಾಗಿ 9606912195 ಅಥವಾ 9606912184 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT