ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಗಳಿಗೆ ಮೂಲಸೌಲಭ್ಯಕ್ಕೆ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಮುಜರಾಯಿ, ಹಜ್‌, ವಕ್ಫ್‌ ಖಾತೆ ಸಚಿವೆ ಶಶಿಕಲಾ ಜೊಲ್ಲೆ
Last Updated 9 ಆಗಸ್ಟ್ 2021, 14:35 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ನೆರೆಯಮಹಾರಾಷ್ಟ್ರದ ಫಂಡರಾಪುರ, ಗುಡ್ಡಾಪುರ ಹಾಗೂ ಆಂಧ್ರಪ್ರದೇಶದ ಶ್ರೀಶೈಲ ಹಾಗೂ ರಾಜ್ಯದಲ್ಲಿರುವ ಪ್ರಮುಖ ದೇವಸ್ಥಾನ, ಯಾತ್ರಾಸ್ಥಳಗಳಲ್ಲಿ ಯಾವುದೇ ಅನಾನುಕೂಲವಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಮುಜರಾಯಿ, ಹಜ್‌, ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಮುಜರಾಯಿ ಸಚಿವರಾದ ಬಳಿಕ ಪ್ರಥಮ ಬಾರಿಗೆ ನಗರದ ಶ್ರೀಸಿದ್ದೇಶ್ವರ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು.

ಮುಜರಾಯಿ ಇಲಾಖೆ ಸಚಿವೆಯಾಗಿರುವುದು ನನ್ನ ಸೌಭಾಗ್ಯ. ಈ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತೇನೆ ಎಂದರು.

ಈ ಮೊದಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ. ಒಳ್ಳೆಯ ಮುಖ್ಯಮಂತ್ರಿ, ಸಚಿವ ಸಂಪುಟ ಇರುವ ಸರ್ಕಾರ ರಾಜ್ಯದಲ್ಲಿ ಇದೆ. ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಬೀಜ, ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕುಚಬಾಳ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ, ಸುರೇಶ ಬಿರಾದಾರ, ದಯಾಸಾಗರ ಪಾಟೀಲ, ಬಸವರಾಝ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ವಿಜಯ ಜೋಶಿ ಮತ್ತಿತರರು ಉಪಸ್ಥಿತರಿದ್ದರು.

ಸಾಂತ್ವಾನ:ಸೋಮವಾರ ನಿಧನರಾದ ಹಿರಿಯ ಸಾಹಿತಿಈಶ್ವರಚಂದ್ರ ಚಿಂತಾಮಣಿ ಅವರ ಪಾರ್ಥೀವ ಶರೀರಕ್ಕೆ ಸಚಿವೆ ಜೊಲ್ಲೆ ಅವರು ಗೌರವ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾತ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT