ಗುರುವಾರ , ಜುಲೈ 29, 2021
26 °C
ತಿಕೋಟಾ, ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರ

ರಾಷ್ಟ್ರಮಟ್ಟದ ಪ್ರಶಸ್ತಿ ಅಂತಿಮ ಸುತ್ತಿಗೆ ತಿಕೋಟಾ, ಹೊನವಾಡ ಆರೋಗ್ಯ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ತಿಕೋಟಾ ಹಾಗೂ ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಭರವಸೆ ಪ್ರಶಸ್ತಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಶಸ್ತಿ ನಾಮನಿರ್ದೇಶನ ಸಮಿತಿ ಹಾಗೂ ಜಿಲ್ಲಾ ಗುಣಮಟ್ಟದ ಭರವಸೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಭರವಸೆ ಪ್ರಶಸ್ತಿಯ ಅಂತಿಮ ಸುತ್ತಿಗೆ ಶಿಫಾರಸು ಆಗಿರುವ ರಾಜ್ಯದ ಏಕೈಕ ಜಿಲ್ಲೆ ವಿಜಯಪುರವಾಗಿದೆ. ಶೀಘ್ರದಲ್ಲೇ ಪ್ರಶಸ್ತಿ ಪ್ರಕಟವಾಗಲಿದೆ ಎಂದರು.

ಮನಗೂಳಿ, ಹೊರ್ತಿ ಹಾಗೂ ವಿಜಯಪುರ ನಗರದ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ ಎಂದು ತಿಳಿಸಿದರು.

2017-18ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದುಕೊಂಡಿತ್ತು. ಮುಂದಿನ 2021 ಫೆಬ್ರುವರಿಗೆ ಅದರ ಅವಧಿ ಮುಗಿಯಲಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಆಸ್ಪತ್ರೆ ಒಳಾಂಗಣ ಹಾಗೂ ಹೊರಾಂಗಣದ ಸ್ವಚ್ಛತೆ ಕಾಪಾಡಬೇಕು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಗೆ ತಾಲ್ಲೂಕು ಹಾಗೂ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಆಸ್ಪತ್ರೆಗಳಲ್ಲಿ ಯಾವುದೇ ತೊಂದರೆಗಳು ಆಗದಂತೆ ನಿರ್ವಹಿಸಬೇಕು ಎಂದು ಸೂಚಿಸಿದರು.

ಸ್ವಚ್ಛಭಾರತ ಯೋಜನೆಯಡಿ ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಇನ್ನೂ ಹೆಚ್ಚಿನ ಕಾರ್ಯವನ್ನೂ ಕೈಗೊಳ್ಳಬೇಕು. ಕಳೆದ ಸಾಲಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿದ ಆಸ್ಪತ್ರೆಗಳ ಪೈಕಿ ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಶೇ22ರಷ್ಟು ಹೆಚ್ಚಳವಾಗಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪಸೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ.ಬಿರಾದಾರ, ಜಿಲ್ಲಾಸ್ಪತ್ರೆ ಸರ್ಜನ್ ಕಟ್ಟಿ, ಡಾ. ಕವಿತಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು