ಬಸವನಬಾಗೇವಾಡಿ: ವಸತಿ ಶಾಲೆಯಲ್ಲಿ ಕರ್ತವ್ಯ ವೇಳೆ ತಂಬಾಕು ಸೇವನೆ ಮಾಡಿ ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ವರ್ಗಾವಣೆಗೊಂಡಿರುವ ತಾಲ್ಲೂಕಿನ ಟಕ್ಕಳಕಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಗಣಪತಿ ಜಟ್ಟೆಪ್ಪಾ ಗುಪ್ತಾ ಅವರನ್ನು ಕೂಡಲೇ ವರ್ಗವಾಗಿರುವ ಜಾಗಕ್ಕೆ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ ಬಣ) ಮುಖಂಡರು ವಸತಿ ಶಿಕ್ಷಣ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ಕುರಿತು ಕರವೇ (ಪ್ರವೀಣಶೆಟ್ಟಿ) ತಾಲ್ಲೂಕು ಅಧ್ಯಕ್ಷ ಸುನೀಲ ರಾಠೋಡ ಹಾಗೂ ಕೊಲ್ಹಾರ ತಾಲ್ಲೂಕು ಅಧ್ಯಕ್ಷ ರವಿ ಗೊಳಸಂಗಿ ಪ್ರಕಟಣೆ ನೀಡಿ, ತಾಲ್ಲೂಕಿನ ಟಕ್ಕಳಕಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಗಣಪತಿ ಗುಪ್ತಾ ಅವರು ಕರ್ತವ್ಯ ವೇಳೆ ತಮ್ಮ ಕೊಠಡಿಯಲ್ಲಿ ತಂಬಾಕು ಸೇವನೆ ಮಾಡಿದಲ್ಲೇ ಬಂದ ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಪಾಲಕರು ಹಾಗೂ ವಿವಿಧ ಸಂಘಟನೆಗಳ ನೀಡಿರುವ ದೂರಿನ ಮೇರೆಗೆ ಇಲಾಖೆ ಹಿರಿಯ ಅಧಿಕಾರಿಗಳು ಅವರನ್ನು ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಬೆಂಡೇಬೆಂಬಳ್ಳಿ ವಸತಿ ಶಾಲೆಗೆ ವರ್ಗಾವಣೆಗೊಳಿಸಿದ್ದಾರೆ.

ಆದರೆ ವರ್ಗಾವಣೆಗೆ ಆದೇಶಿಸಿ 15 ದಿನಗಳಾದರೂ ಗಣಪತಿ ಗುಪ್ತಾ ಅವರು ಹಿರಿಯ ಅಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಟಕ್ಕಳಕಿ ವಸತಿ ಶಾಲೆಯಲ್ಲೇ ಮುಂದುವರೆದಿದ್ದಾರೆ. ಕಾರಣ ಕೂಡಲೇ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ವರ್ಗಾವಣೆಗೊಳಿಸಿರುವ ಶಾಲೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಬೇಕೆಂದು ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದೇವೆ. ಕ್ರಮವಹಿಸುವಲ್ಲಿ ನಿರ್ಲಕ್ಷಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಮುಖಂಡರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.