ಭಾನುವಾರ, ಮೇ 22, 2022
21 °C

ತತ್ವ, ಸಿದ್ಧಾಂತದ ಪಕ್ಷ ಬಿಜೆಪಿ: ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ತತ್ವ, ಸಿದ್ಧಾಂತ ಕೇಂದ್ರಿ ಪಕ್ಷ ಬಿಜೆಪಿಯಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಈ ಧ್ಯೇಯೋದ್ದೇಶ ಬಿಜೆಪಿ ಸಾಮಾನ್ಯ ಕಾರ್ಯಕರ್ತನನ್ನು ಸ್ವಾಭಿಮಾನದಿಂದ ತಲೆ ಎತ್ತಿ ನಿಲ್ಲುವಂತೆ ಮಾಡುವ ಪಕ್ಷವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ರಾಜರಾಜೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಮಟ್ಟದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ರಾಜಕಾರಣವನ್ನು ವ್ರ‌ತವಾಗಿ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ರಾಮಮಂದಿರ ನಿರ್ಮಾಣ, ಕಾಶ್ಮೀರ ವಿಶೇಷ ಸ್ಥಾನಮಾನ ರದ್ಧತಿಯಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ, ಈ ಕಾರಣಕ್ಕಾಗಿಯೇ ಇವತ್ತು ಹಿಂದುಳಿದ ವರ್ಗಕ್ಕೆ ಸೇರಲು ಸ್ಪರ್ಧೆ ನಡೆಯುತ್ತಿದೆ ಎಂದರು. 

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ನವದೆಹಲಿಯಲ್ಲಿ ರೈತರು ಹೋರಾಟ ನಡೆಸುತ್ತಿಲ್ಲ. ರೈತರ ಹೆಸರಿನಲ್ಲಿ ಡೋಂಗಿಗಳು ಹೋರಾಟ ನಡೆಸುತ್ತಿದ್ದಾರೆ. ದೇಶದ್ರೋಹಿಗಳು ಹೋರಾಟ ನಡೆಸುತ್ತಿದ್ದಾರೆ ಎಂದರು.

ಕರ್ನಾಟಕ ಸಾವಯವ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹಾಗೂ ಸಾಬು ಮಾಶ್ಯಾಳ, ಬೂತಾಳಿ, ಬಿಜೆಪಿ ಹಿರಿಯ ಮುಖಂಡರಾದ ಪ್ರಕಾಶ ಅಕ್ಕಲಕೋಟ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಉಮೇಶ ಕಾರಜೋಳ, ಶಿಲ್ಪಾ ಕುದರಗೊಂಡ, ಶೀಲವಂತ ಉಮರಾಣಿ, ಕೃಷ್ಣಾ ಗುನ್ನಾಳಕರ, ರವಿ ಬಿರಾದಾರ (ನಾಗಠಾಣ), ವಿಜಯ ಜೋಶಿ, ಪ್ರಮೋದ ಬಡಿಗೇರ, ಸಂತೋಷ ವಾಗ್ಮೋರೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು