ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ: ಸುನೀಲಗೌಡ

Last Updated 15 ಜುಲೈ 2021, 12:12 IST
ಅಕ್ಷರ ಗಾತ್ರ

ವಿಜಯಪುರ: ಗ್ರಾಮಗಳ ಅಭಿವೃದ್ಧಿಗೆ ಕೇವಲ ಶಾಸಕರ ಮೇಲೆ ಅವಲಂಭಿತರಾಗದೇ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಪ್ರಾಮಾಣಿಕವಾಗಿ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಆಗುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಹೇಳಿದರು.

ತೊರವಿ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ತಿಕೋಟಾ ತಾಲ್ಲೂಕಿನ ಗ್ರಾಮ ಪಂಚಾಯ್ತಿ ನೂತನ ಸದಸ್ಯರನ್ನು ಸನ್ಮಾನಿಸಿ ಅವರುಮಾತನಾಡಿದರು.

ಕೊರೊನಾ ಅಥವಾ ಇನ್ನಿತರ ಕಾಯಿಲೆಗಳನ್ನು ಹೋಗಲಾಡಿಸಲು ಗ್ರಾಮಗಳ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಕುಡಿಯುವ ನೀರು ಸೌಲಭ್ಯ ಹಾಗೂ ಪ್ರತಿ ಮನೆ-ಮನೆಗೆ ಶೌಚಾಲಯದ ವ್ಯವಸ್ಥೆ ಹೀಗೆ ಸರ್ಕಾರದ ಹಲವು ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು, ಯೋಜನೆಗಳನ್ನು ಪೂರ್ಣಗೊಳಿಸಬೇಕು. ಇಂತಹ ಸಂದರ್ಭದಲ್ಲಿ ಅಡಚಣೆಗಳ ಎದುರಾದಲ್ಲಿ ನನ್ನ ಗಮನಕ್ಕೆ ತರಬೇಕು ಎಂದರು.

ಇದೀಗ ಕೊರೊನಾ ಮೂರನೇ ಅಲೆಗೆ ಕಾಲಿರಿಸಲಿದೆ ಎಂದು ಕೆಲ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕಾಯಿಲೆಯನ್ನು ತಡೆಯಲು ನಮ್ಮಿಂದಲೇ ಸಾಧ್ಯ. ಅದಕ್ಕೆ ನಾವೆಲ್ಲರೂ ಜಾಗೃತರಾಗಬೇಕು. ಗ್ರಾಮ ಪಂಚಾಯ್ತಿ ಸದಸ್ಯರು ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ತಿಕೋಟಾ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಮೈಬೂಬ ಜಿಲಾನಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಐ.ಎ.ಬಿರಾದಾರ, ರೇಖಾ ಪವಾರ, ಪದ್ಮಿನಿ ಬಿರಾದಾರ, ರಾಜಶ್ರೀ ತುಂಗಳ, ರಾಜಶ್ರೀ ದಶವಂತ, ಸುರೇಶ ಕಳ್ಳಿಮನಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT