ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ಎಂದ ಅಧ್ಯಕ್ಷೆ ಸುಜಾತಾ

Last Updated 11 ಜುಲೈ 2020, 11:29 IST
ಅಕ್ಷರ ಗಾತ್ರ

ವಿಜಯಪುರ: ‘ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಗಾದೆಯು ಅಧಿಕಾರ ಎಂದು ತಿಳಿಯದೇ ಜವಾಬ್ದಾರಿ ಎಂದು ಅರಿತು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೃಷಿ ಇಲಾಖೆ ಜಂಟಿ ನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದೇನೆ ಎಂದರು.

ಕೋವಿಡ್‌ ನಿರ್ವಹಣೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಂದ ಮಾಹಿತಿ ಪಡೆದಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತಿದೆ. ಸದ್ಯ ಬೆಡ್‌ ಕೊರತೆ ಇಲ್ಲ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಹಿಂದೇಟು ಹಾಕಿದರೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದರು.

ಪಕ್ಷಕ್ಕೆ ದ್ರೋಹ:ಪಕ್ಷದಲ್ಲಿ ಅಧಿಕಾರ, ಸ್ಥಾನಮಾನ ಅನುಭವಿಸಿದ್ದ ಉಮೇಶ ಕೋಳ್ಕೂರ, ಶಿವಶರಣ ಭೈರಗೊಂಡ, ಶಿವಯೋಗಪ್ಪ ನೇದಲಗಿ ಅವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯ ಬಿಂದುರಾಯಗೌಡ ಪಾಟೀಲ, ಮಹಾಂತಗೌಡ ಪಾಟೀಲ, ಕಲ್ಲಪ್ಪ ಮಟ್ಟಿ ಮತ್ತು ಜ್ಯೋತಿ ಅಸ್ಕಿ ಅವರಿಗೆ ಆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದರಿಂದ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೂ ಬಿಜಿಪಿ ಮುಖಂಡರು ಹಣ ಕೇಳಿದ ಕಾರಣಕ್ಕೆ ಬೇಸತ್ತು ಕಾಂಗ್ರೆಸ್‌ ಬೆಂಬಲಿಸಿದ್ದಾರೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಸೋಮನಾಥ ಕಳ್ಳಿಮನಿ, ಸಂಗಮೇಶ ಬಬಲೇಶ್ವರ, ಹಮೀದ್‌ ಮುಶ್ರೀಫ್‌, ಗಂಗಾಧರ ಸೆಂಬಣ್ಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT