ಬುಧವಾರ, ಸೆಪ್ಟೆಂಬರ್ 22, 2021
26 °C

ಸಾವಯವ ಕೃಷಿಗೆ ಆದ್ಯತೆ: ವಿಜುಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಗುಣಮಟ್ಟದ ಬಿತ್ತನೆ ಬೀಜ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ ಹೇಳಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಗುಣಗಳನ್ನು ಯುವ ಪೀಳಿಗೆಯು ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕಾರಣಕರ್ತರಾಗಬೇಕು ಎಂದು ತಿಳಿಸಿದರು.

ಕೃಷಿ ಉತ್ಪಾದನೆ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಕರೆ ನೀಡಿದರು.

ಸಂಸ್ಥೆಯ ನಿರ್ದೇಶಕ ಕರುಣಾಕರ ಶೆಟ್ಟಿ ಹಾಗೂ ಜಂಟಿ ನಿರ್ದೇಶಕ ಲಕ್ಷ್ಮಣ ಎಸ್. ಕಳೊನ್ನವರ ಮತ್ತು ಸಂಸ್ಥೆಯ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.