ಶನಿವಾರ, ಸೆಪ್ಟೆಂಬರ್ 18, 2021
30 °C

ದೇವಸ್ಥಾನ, ಯಾತ್ರಾಸ್ಥಳಗಳಿಗೆ ಮೂಲಸೌಲಭ್ಯಕ್ಕೆ ಆದ್ಯತೆ: ಶಶಿಕಲಾ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹಾರಾಷ್ಟ್ರದ ಫಂಡರಾಪುರ, ಗುಡ್ಡಾಪುರ ಹಾಗೂ ಆಂಧ್ರಪ್ರದೇಶದ ಶ್ರೀಶೈಲ ಹಾಗೂ ರಾಜ್ಯದಲ್ಲಿರುವ ಪ್ರಮುಖ ದೇವಸ್ಥಾನ, ಯಾತ್ರಾಸ್ಥಳಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಮುಜರಾಯಿ ಸಚಿವರಾದ ಬಳಿಕ ಪ್ರಥಮ ಬಾರಿಗೆ ನಗರದ ಶ್ರೀಸಿದ್ದೇಶ್ವರ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು.

ಮುಜರಾಯಿ ಇಲಾಖೆ ಸಚಿವೆಯಾಗಿರುವುದು ನನ್ನ ಸೌಭಾಗ್ಯ. ಈ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತೇನೆ.ಈ ಮೊದಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ ಎಂದರು.

ಒಳ್ಳೆಯ ಮುಖ್ಯಮಂತ್ರಿ, ಸಚಿವ ಸಂಪುಟ ಇರುವ ಸರ್ಕಾರ ರಾಜ್ಯದಲ್ಲಿ ಇದೆ. ರಾಜ್ಯದ ಅಭಿವೃದ್ಧಿ ಗೆ ಆದ್ಯತೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು