ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾಸ್ಕರ’ ಪ್ರಶಸ್ತಿಗೆ ಪ್ರೊ.ಕಿರಣ್‌ ಕುಮಾರ್‌ ಆಯ್ಕೆ

Published 26 ಸೆಪ್ಟೆಂಬರ್ 2023, 23:27 IST
Last Updated 26 ಸೆಪ್ಟೆಂಬರ್ 2023, 23:27 IST
ಅಕ್ಷರ ಗಾತ್ರ

ಸಿಂದಗಿ (ವಿಜಯಪುರ ಜಿಲ್ಲೆ): ‘ಪಟ್ಟಣದ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನದಿಂದ ನೀಡುವ ರಾಷ್ಟ್ರಮಟ್ಟದ ‘ಭಾಸ್ಕರ’ ಶ್ರೇಷ್ಠ ವಿಜ್ಞಾನಿ ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಪ್ರೊ.ಎ.ಎಸ್.ಕಿರಣ್‌ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಸಾರಂಗಮಠದ ಪೀಠಾಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

‘ಪ್ರಶಸ್ತಿಯು ₹1 ಲಕ್ಷ ನಗದು ಮತ್ತು ಬೆಳ್ಳಿ ಪ್ರಶಸ್ತಿ ಫಲಕ ಒಳಗೊಂಡಿದೆ. ನವೆಂಬರ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಸಿಂದಗಿಯಲ್ಲಿ ನಡೆಯಲಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶಾಸಕ ಅಶೋಕ ಮನಗೂಳಿ ಮಾತನಾಡಿ, ‘ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಪ್ರೇರಣೆಯಿಂದ ಜಿಲ್ಲೆಯ 11ನೇ ಶತಮಾನದ ಖಗೋಳ ವಿಜ್ಞಾನಿ, ಗಣಿತಜ್ಞ ಭಾಸ್ಕರಾಚಾರ್ಯ ಅವರ ಸ್ಮರಣೆಯಲ್ಲಿ ಈ ಪ್ರಶಸ್ತಿ ನಾಲ್ಕು ವರ್ಷಗಳಿಂದ ನೀಡಲಾಗುತ್ತಿದೆ. ಈವರೆಗೆ ಸಿ.ಎನ್.ಆರ್. ರಾವ್‌, ಯು.ಆರ್.ರಾವ್‌, ಎಸ್.ಎ.ಪಾಟೀಲ ಮತ್ತು ಕೆ.ಕಸ್ತೂರಿ ರಂಗನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ’ ಎಂದರು.

ಪ್ರತಿಷ್ಠಾನದ ಸಂಚಾಲಕ ಪ್ರೊ.ವಿ.ಡಿ.ವಸ್ತ್ರದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT