ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರ ಸಾಮಗ್ರಿ ಮುದ್ರಣ: ಘೋಷಣಾ ಪತ್ರ ಸಲ್ಲಿಕೆ ಕಡ್ಡಾಯ

Last Updated 4 ಅಕ್ಟೋಬರ್ 2021, 15:44 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಮತ್ತು ಪೋಸ್ಟರ್‌ಗಳ ಬಗ್ಗೆ ಕಡ್ಡಾಯವಾಗಿ ಘೋಷಣಾ ಪತ್ರ ಸಲ್ಲಿಸುವಂತೆ ಮುದ್ರಕರಿಗೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಸೂಚಿಸಿದರು.

ವಿಜಯಪುರ ನಗರದ ವಿವಿಧ ಮುದ್ರಣಾಲಯದ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಪೋಸ್ಟರ್‌ಗಳಿಗೆ ಕಡ್ಡಾಯವಾಗಿ ಮುದ್ರಕರ ಹೆಸರು, ವಿಳಾಸ ಹಾಗೂ ಪ್ರಕಟಿಸುವ ಪಾಂಪ್ಲೆಟ್ ಹಾಗೂ ಪೋಸ್ಟರ್ ಗಳ ಸಂಖ್ಯೆಯನ್ನು ನಮೂದಿಸಬೇಕು ಎಂದರು.

ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುದ್ರಕರು, ವಿವಿಧ ತಾಲ್ಲೂಕುಗಳ ಮುದ್ರಕರು ಮತ್ತು ಜಿಲ್ಲೆಗೆ ಹೊಂದಿಕೊಂಡಿರುವ ಮುದ್ರಣಾಲಯದ ಮುದ್ರಕರು ಸಹ ಚುನಾವಣಾ ಆಯೋಗದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಡಾ. ಔದ್ರಾಮ್‌ ಸೇರಿದಂತೆ ವಿವಿಧ ಮುದ್ರಣಾಲಯಗಳ ಮುದ್ರಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT