ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂವಿಧಾನ ಮೌಲ್ಯಗಳನ್ನು ಉಳಿಸಿ’

ಸಂವಿಧಾನ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಿದ ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ
Published 1 ಫೆಬ್ರುವರಿ 2024, 14:12 IST
Last Updated 1 ಫೆಬ್ರುವರಿ 2024, 14:12 IST
ಅಕ್ಷರ ಗಾತ್ರ

ತಾಂಬಾ: ಸಂವಿಧಾನವನ್ನು ಒಂದು ದಿನದ ಆಚರಣೆ ಸೀಮಿತ ಮಾಡದೇ ತಮ್ಮ ಮನೆ ಮನೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ ಹೇಳಿದರು.

ಗ್ರಾಮದಲ್ಲಿ ಗುರುವಾರ ನಡೆದ ಸಂವಿಧಾನ ಜಾಗೃತಿ ಮೆರವಣಿಗೆ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಮೌಲ್ಯಗಳು ಜೀವಂತವಾಗಿರಬೇಕೆಂಬ ಉದ್ದೇಶದಿಂದ ಜಾಗೃತ ಜಾಥಾ ಹಮ್ಮಿಕೊಳ್ಳಲಾಗಿದೆ. ಹಿಂದಿನ ಕಾಲದಲ್ಲಿ ಮಹಿಳೆಯರು ಮಾತನ್ನು ಆಡದ ಸ್ಥಿತಿಯಲ್ಲಿದ್ದವರಿಗೆ ಸಂವಿಧಾನದ ಮೂಲಕ ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲರೂ ಸಮಾನಾಗಿ ಬದುಕುವ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ನಮ್ಮೆಲ್ಲ ಮಹಿಳಾ ಬಂಧುಗಳು ಸಂವಿಧಾನ ಮೌಲ್ಯಗಳನ್ನು ಮರೆಯಬಾರದು ಎಂದರು.

ದೇಶದಲ್ಲಿ ತುಳಿತಕ್ಕೊಳಗಾದವರ ಶೋಷಿತರಿಗೆ ರಕ್ಷಣೆ ನೀಡುತ್ತಿರುವುದು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಭಾರತ ಸಂವಿಧಾನ. ನಮ್ಮ ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಕಟಿಬದ್ದರಾಗಿ ನಿಲ್ಲೋಣ. ಅಂಬೇಡ್ಕರವರು ದೇಶಕ್ಕೆ ಅವಶ್ಯಕ ಮತ್ತು ಅದ್ಬುತವಾದ ಸಂವಿಧಾನ ರಚಿಸಿಕೊಟ್ಟಿದರಿಂದ ಎಲ್ಲರ ಬದುಕು ಹಸನಾಗಿ ನೆಮ್ಮದಿಯ ಜೀವನ ನಡೆಸುವಂತಗಿದೆ ಎಂದು ಹೇಳಿದರು.

ಜಾಥಾದಲ್ಲಿ ಎಂ.ಡಿ.ಆರ್.ಎಸ್ ಶಾಲೆಯ ಶಿಕ್ಷಕ ಶ್ರೀಶೈಲ ನಾವಿ ಉಪನ್ಯಾಸ ನೀಡಿ, ಸಂವಿಧಾನದ ಬಗ್ಗೆ ಸಾರ್ವಜನಿಕರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗುವಂತೆ ಮನ-ಮುಟ್ಟುವಂತೆ ತಿಳಿಸಿದರು.

ತಾಂಬಾ ಹಾಗೂ ಸುತ್ತಮುತ್ತಲಿನ ಗ್ರಾಮದ ಎಲ್ಲಾ ಶಾಲಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಮೆರವಣಿಗೆ ನಂತರ ತಾಂಬಾ ಹಾಗೂ ಸುತ್ತಮುತ್ತಲಿನ ಶಾಲೆಯ ಮಕ್ಕಳಿಂದ ಭಾಷಣ, ನೃತ್ಯ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ತಾಂಬಾ ಗ್ರಾಮದಲ್ಲಿ ಹಬ್ಬದ ವಾತವರಣ ಸೃಷ್ಟಿಯಾಗಿತ್ತು.

ತೋಟಗಾರಿಕಾ ಇಲಾಖೆ ನೂಡಲ್ ಅಧಿಕಾರಿ ಎಚ್.ಎಸ್. ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಜಾಕ್ ಚಿಕ್ಕಗಸಿ, ಕ್ಷೇತ್ರ ಸಮನ್ವಯಧಿಕಾರಿ ಶ್ರೀಧರ ನಡುಗಡ್ಡಿ ಮಾತನಾಡಿದರು.

ಉಮೆಶ ನಾಟೀಕಾರ, ಶ್ರೀಕಾಂತ ಹಡಲಸಂಗ, ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಮಾರಲಾಬಾವಿ, ಸಿ.ಆರ್.ಪಿ. ಮಲ್ಲಿಕಾಜರ್ುನ ಸೊನಂದ, ಚೇರಮನ ಜಕ್ಕಪ್ಪ ಹತ್ತಳ್ಳಿ, ಪ್ರಕಾಶ ಮುಂಜಿ, ರಾಜು ಗಂಗನಳ್ಳಿ, ಅಪ್ಪಣ್ಣ ಕಲ್ಲೂರ, ರಾಯಗೊಂಡ ಪೂಜಾರಿ, ರವಿಂದ್ರ ನಡುಗಡ್ಡಿ, ರಾಮಚಂದ್ರ ದೊಡ್ಡಮನಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT