ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸರ್ಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆ

Last Updated 30 ಸೆಪ್ಟೆಂಬರ್ 2020, 16:51 IST
ಅಕ್ಷರ ಗಾತ್ರ

ವಿಜಯಪುರ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸರ್ಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಲೇಂಡಿ ಮಾತನಾಡಿ, ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ರದ್ದುಗೊಳಿಸಿರುವ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳ ಮಾಡಬೇಕು, ಗಳಿಕೆ ರಜೆ ಸೌಲಭ್ಯ ಮತ್ತೆ ನೀಡಬೇಕು ಎಂದು ಆಗ್ರಹಿಸಿದರು.

30 ವರ್ಷ ಸೇವೆ ಪೂರೈಸಿರುವ ಅಥವಾ 55 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ಜೀವ ವಿಮಾ ನಿಗಮ ಸೇರಿ ಹಲವು ಸಾರ್ವಜನಿಕ ರಂಗದ ಉದ್ದಿಮೆಗಳ ಖಾಸಗೀಕರಣ ಮಾಡಬಾರದು. ಕೂಡಲೇ ಜಿ.ಎಸ್.ಟಿ. ಬಿಡುಗಡೆ ಮಾಡಬೇಕು. ಹಲವು ಕಾರ್ಮಿಕ ವಿರೋಧಿ ಮತ್ತು ರೈತ- ವಿರೋಧಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕು, ಕೊರೊನಾ ವಾರಿಯರ್ಸ್‍ಗಳಿಗೆ ವಿಶೇಷ ಭತ್ಯೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಚನ್ನಾರಡ್ಡಿ ಹೇಮಂಟಿ, ಎಸ್.ಜಿ. ಸಂಗಾಪುರ, ಮಂಜುನಾಥ ಭಂಟನೂರ, ಎಸ್.ವೈ.ಶಿಂಗೆ, ದುಂಡಪ್ಪ ಬಗಲಿ, ಸಂಜೀವ ಹೆಬ್ಬಿ, ಸಿದ್ರಾಮಯ್ಯ ಪೂಜಾರಿ, ಆರ್.ಎಸ್.ಮೆಣಸಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT