ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಂದು ಘೋಷಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಆಲಮಟ್ಟಿ ಲಾಲ್‌ಬಹಾದ್ದೂರ ಶಾಸ್ತ್ರಿ ಜಲಾಶಯದ ಎತ್ತರವನ್ನು 524.256 ಮೀ.ಗೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಗೆ ತಗಲುವ ಅನುದಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡಬೇಕು. ಆಲಮಟ್ಟಿ ಹಿನ್ನೀರಿನಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿ ಮುಧೋಳ ಬೀಳಗಿ ತಾಲ್ಲೂಕಿನ ಜಮೀನುಗಳು ಹಿನ್ನೀರಿನಿಂದ ಮುಳುಗಡೆಯಾಗಿದ್ದು ಇನ್ನು ಪರಿಹಾರ ಬಂದಿಲ್ಲ. ಅವರಿಗೆ ಪರಿಹಾರ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿರಿಸಲಾಗಿದೆ.