ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ವಿಜಯಪುರದಲ್ಲಿ ಪ್ರತಿಭಟನೆ

Last Updated 28 ಸೆಪ್ಟೆಂಬರ್ 2020, 8:51 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ, ಕಾರ್ಮಿಕ ಸಂಘಟನೆಗಳಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.

ಕರ್ನಾಟಕ ಬಂದ್ ಅಂಗವಾಗಿ ನಗರದ ಸಿದ್ದೇಶ್ವರ ಗುಡಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಕಾರ್ಮಿಕರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕೃತಿ ದಹಿಸಿ, ಘೋಷಣೆ ಕೂಗಿದರು.

ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಚಾಲಕರ ಟ್ರೇಡ್ ಯೂನಿಯನ್, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್, ವಿಜಯಪುರ ಮರ್ಚೆಂಟ್ಸ್ ಅಸೋಸಿಯೇಷನ್, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್‌ ಆರ್ಗನೈಸೇಶನ್, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬೆಂಬಲ ವ್ಯಕ್ತಪಡಿಸಿದರು.

ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಸ್, ಆಟೊ, ಟಂಟಂ ಸೇರಿದಂತೆ ಬಹುತೇಕ ವಾಹನಗಳ ಸಂಚಾರ ಇತ್ತಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಅಂಗಡಿ, ಮುಂಗಟ್ಟುಗಳು ಅರ್ಧದಷ್ಟು ಬಾಗಿಲು ತೆರೆದು, ವ್ಯಾಪಾರ, ವಹಿವಾಟು ನಡೆಸಿದವು. ಮಾರುಕಟ್ಟೆಯಲ್ಲಿ ಗ್ರಾಹಕರ ಸಂಖ್ಯೆ ಕ್ಷೀಣವಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT