ವಿಜಯಪುರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಕಲ ಸೌಲಭ್ಯ ಇದೆ. ಆದರೂ ಯಾಕೆ ಈ ತಾರತಮ್ಯ ಜಿಲ್ಲೆಗೆ ಏಕೆ ಮೋಸ ಮಾಡುತ್ತಿದ್ದೀರಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ಸರ್ಕಾರಕ್ಕೆ ಏನು ತೊಂದರೆ
ಸಿದ್ದನಗೌಡ ಪಾಟೀಲ ಸಮಾಜವಾದಿ ಮುಖಂಡ
ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರು ಜನರ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಲು ವಿಫಲರಾಗಿದ್ದಾರೆ. ಇದು ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದ್ದು ತೋರಿಸುತ್ತದೆ
-ಡಾ.ಮಲ್ಲಿಕಾ ಘಂಟಿವಿಶ್ರಾಂತ ಕುಲಪತಿಹಂಪಿ ವಿವಿ
ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಸಚಿವರು ಶಾಸಕರು ವರ್ತಿಸುತ್ತಿದ್ದಾರೆ. ನಿಮಗೆ ಕಾಲೇಜು ತರಲು ಆಗದಿದ್ದರೆ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳಿ