ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಡಿ ಹರಾಜು ರದ್ದು: ಭರವಸೆ

Published 15 ಸೆಪ್ಟೆಂಬರ್ 2023, 5:00 IST
Last Updated 15 ಸೆಪ್ಟೆಂಬರ್ 2023, 5:00 IST
ಅಕ್ಷರ ಗಾತ್ರ

ಇಂಡಿ: ಪುರಸಭೆ ವತಿಯಿಂದ ನಿರ್ಮಾಣ ಮಾಡುತ್ತಿರುವ ಮೆಗಾ ಮಾರುಕಟ್ಟೆ ಅಂಗಡಿಗಳ ಹರಾಜು ವಿರೋಧಿಸಿ ಪುರಸಭೆ ಸದಸ್ಯರು, ಅಂಗಡಿಕಾರರು, ವ್ಯಾಪಾರಸ್ಥರು, ವಿವಿಧ ಸಂಘಟನೆಯ ಮುಖ್ಯಸ್ಥರು ಪುರಸಭೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ, ದೇವೇಂದ್ರ ಕುಂಬಾರ, ಬುದ್ದುಗೌಡ ಪಾಟೀಲ, ‘ಪುರಸಭೆ ಸದಸ್ಯರ ಗಮನಕ್ಕೆ ತರದೇ ಟೆಂಡರ್ ಕರೆಯಲಾಗಿದೆ’ ಎಂದು ಆರೋಪಿಸಿದರು.

‘ಪಟ್ಟಣದಲ್ಲಿ ರಸ್ತೆ ವಿಸ್ತರಣೆ ವೇಳೆ ಅಂಗಡಿ ಕಳೆದುಕೊಂಡವರಿಗೆ ಮಾರುಕಟ್ಟೆಯಲ್ಲಿ ಅಂಗಡಿ ಕೊಡುವುದಾಗಿ ಪುರಸಭೆಯಿಂದ ಭರವಸೆ ನೀಡಲಾಗಿತ್ತು’ ಎಂದು ತಿಳಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ‌ಪುರಸಭೆ ಆಡಳಿತಾಧಿಕಾರಿ ಅಬೀದ್ ಗದ್ಯಾಳ, ‘ಟೆಂಡರ್ ಪ್ರಕ್ರಿಯೆ ಈ ಮೊದಲೇ ಆಗಿತ್ತು. ಈ ಮೊದಲಿನ ಪುರಸಭೆ ಮುಖ್ಯಾಧಿಕಾರಿಗಳು ನೂರು ಮಳಿಗೆಗಳ ಕೆಲಸ ಮುಗಿದಿದ್ದು, ಟೆಂಡರ್ ಪ್ರಕ್ರಿಯೆಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಮೇಲಧಿಕಾರಿಗಳು ಅನುಮತಿ ನೀಡಿದ್ದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಟೆಂಡರ್ ಕರೆಯಲಾಗಿದೆ’ ಎಂದರು.

‘ಈ ಮೊದಲು ಇದ್ದ ಪುರಸಭೆ ಮುಖ್ಯಾಧಿಕಾರಿಗಳು ಸದಸ್ಯರ ಗಮನಕ್ಕೆ ತರದೇ ಇರುವುದು ನನ್ನ ಗಮನಕ್ಕೆ ಇಲ್ಲ. ಕಾರಣ ಟೆಂಡರ್ ಪ್ರಕ್ರಿಯೆ ರದ್ದು ಮಾಡಿ, ಸಾರ್ವಜನಿಕರ, ರಸ್ತೆ ವಿಸ್ತರಣೆ ವೇಳೆ ಅಂಗಡಿ ಕಳೆದುಕೊಂಡವರ ಮತ್ತು ಪುರಸಭೆ ಸದಸ್ಯರ ಸಮ್ಮುಖದಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು’ ಎಂದರು.

ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಪುರಸಭೆ ಸದಸ್ಯರಾದ ಸೈಪನ್ ಪವಾರ, ತಿಪ್ಪಣ್ಣ ಉಟಗಿ, ಜಯರಾಮ ರಾಠೋಡ, ಯಲ್ಲಪ್ಪ ಹದರಿ, ಪಿಂಟು ಪವಾರ, ವಿಜಯ ಮೂರಮನ್, ವ್ಯಾಪಾರಸ್ಥರಾದ ಚಿತ್ತು ಧನಶೆಟ್ಟಿ, ಮಂಜು ದೇವರ, ಅಶೋಕ ಅಕಲಾದಿ, ಮಚೇಂದ್ರ ಕದಮ್, ಅಪ್ಪು ಪವಾರ, ಶಿವಾನಂದ ಖೇಡಗಿ, ಚಂದನ ಧನಪಾಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT