ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗದದ ದೋಣಿ ಹರಿಬಿಟ್ಟು ಪ್ರತಿಭಟನೆ

Last Updated 10 ಜನವರಿ 2021, 10:52 IST
ಅಕ್ಷರ ಗಾತ್ರ

ವಿಜಯಪುರ: ನಗರದಲ್ಲಿ ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಬೃಹತ್ ಗುಂಡಿ ಬಿದ್ದು ನೀರು ತುಂಬಿಕೊಂಡಿರುವನಗರದ ಐತಿಹಾಸಿಕ ಜೋಡು ಗುಮ್ಮಟದ ಎದುರಿನ ರಸ್ತೆಯಲ್ಲಿ ಹಾಗೂ ಹತ್ತಾರು ಕಾಗದದ ದೋಣಿಗಳನ್ನು ತೇಲಿಬಿಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ, ಸ್ಥಳೀಯ ಶಾಸಕರ ವಿರುದ್ಧ ಹಾಗೂ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ರಸ್ತೆಯನ್ನು ದುರಸ್ತಿ ಮಾಡಲಾಗದಷ್ಟು ಸರ್ಕಾರ ನಿರ್ಲಕ್ಷ್ಯ ತಾಳಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದ ಅವಧಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.‌

ಪ್ರತಿದಿನ ಸಾವಿರಾರು ವಾಹನಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುವ ಮುಖ್ಯ ರಸ್ತೆ ಹದಗೆಟ್ಟು ವರ್ಷವಾದರೂ ಕನಿಷ್ಟ ಗುಂಡಿ ಮುಚ್ಚಿ, ಸಂಚಾರ ಯೋಗ್ಯ ಮಾಡಿಲ್ಲ ಎಂದು ದೂರಿದರು.

ಮಹಿಳಾ ಕಾಂಗ್ರೆಸ್ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳಾ ಸೇರಿದಂತೆ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT