ವಿಜಯಪುರ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬೀಜ, ಗೊಬ್ಬರ ಇನ್ನೀತರ ಅಗತ್ಯ ಪರಿಹಾರವನ್ನು ಕೂಡಲೇ ಒದಗಿಸಿ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ತಾಡಪತ್ರಿಗಳ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂದು ಕೇಳಿಬರುತ್ತಿರುವ ದೂರುಗಳನ್ನು ಪರಿಗಣಿಸಿ, ಸರಿಪಡಿಸಿ, ಬಡರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಿ ಎಂದರು.

ತಾಲ್ಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ವಿತರಣೆಯಲ್ಲಿನ ಲೋಪದೋಪಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಕಡೆಗಳಲ್ಲಿ ಕೆಟ್ಟುಹೋಗಿರುವ ನೀರಿನ ಆರ್ಒ ಪ್ಲಾಂಟ್ಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ತಿಳಿಸಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಕಾರ್ಡ್ ಯೋಜನೆಯು ಅರ್ಹ ಬಡವರಿಗೆ ತಲುಪುವಂತೆ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರತಿಭಾ ಪಾಟೀಲ,ತಾಲ್ಲೂಕು ಪಂಚಾಯ್ತಿ ಇಒ ಬಿ.ಎಸ್.ರಾಠೋಡ, ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಸಿ.ಬಿ.ಕುಂಬಾರ,ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.