ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿ ಸೂಚನೆ

Last Updated 28 ಜುಲೈ 2020, 14:05 IST
ಅಕ್ಷರ ಗಾತ್ರ

ವಿಜಯಪುರ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸ್ಥೈರ್ಯ ಯೋಜನೆಯಡಿ ಆರ್ಥಿಕ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಶಕ್ತಿ ಕೇಂದ್ರದ 2020-21 ನೇ ಸಾಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಾಲ್ಯವಿವಾಹದಿಂದ ರಕ್ಷಿಸಿದ ಮಕ್ಕಳ ಬಗ್ಗೆಯೂ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.

ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಶೀಘ್ರ ಪರಿಹಾರ ಒದಗಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದರು.

ಮುಂದಿನ ಮೂರು ತಿಂಗಳ ಅವಧಿಗೆ ರೂಪಿಸಿರುವ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿಗೆ ತಿಳಿಸಿದರು.

ಕೋವಿಡ್‌ ನಿಯಂತ್ರಣ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳಿಗೆ ಪೂರಕವಾದ ಚಟುವಟಿಕೆಗಳ ಜೊತೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಮಹಿಳೆಯರಿಗೆ ಸರ್ಕಾರದಿಂದ ಸಿಗುವ ವಿವಿಧ ಸಾಲಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು ಎಂದರು.‌

ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯಡಿಯ ವಿವಿಧ ಚಟುವಟಿಕೆಗಳ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮತ್ತು ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಸಮೂಹ ಮಾಧ್ಯಮಗಳ ಮೂಲಕ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆಲಗೂರ, ಸಿಡಿಪಿಒ ಚವ್ಹಾಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT